ದೇಶದ ಉತ್ತಮ ಭವಿಷ್ಯಕ್ಕಾಗಿ ಮತದಾನ ಮಾಡಿ

| Published : Apr 20 2024, 01:04 AM IST

ಸಾರಾಂಶ

ಹೊನ್ನಾಳಿ ತಾಲೂಕಿನ ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.

ಕನ್ನಡ ಪ್ರಭ ವಾರ್ತೆ ಹೊನ್ನಾಳಿ

ತಾಲೂಕಿನ ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.

ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ವಿ.ಅಭಿಷೇಕ್ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ನಾಳಿನ ಉತ್ತಮ ಭವಿಷ್ಯ ನಿರ್ಮಾಣಕ್ಕಾಗಿ ತಪ್ಪದೇ ಎಲ್ಲ ಅರ್ಹ ಮತದಾರರು ಮತದಾನ ಮಾಡಬೇಕು. ಪ್ರಜೆಗಳಿಗೆ ದತ್ತವಾದ ಸಾಂವಿಧಾನಾತ್ಮಕ ಹಕ್ಕು ಮತದಾನವಾಗಿದೆ. ಇದನ್ನು ಎಲ್ಲರೂ ದೇಶದ ಹಿತಕ್ಕಾಗಿ ಚಲಾಯಿಸಬೇಕು ಎಂದು ಹೇಳಿದರು.

ಮತದಾನದ ಮಹತ್ವದ ಬಗ್ಗೆ ಈಗಾಗಲೇ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಜಾಥಾ, ಬೈಕ್ ರ್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡಲಾಗುತ್ತಿದೆ. ಮತದಾನ ನಿರ್ಲಕ್ಷಿಸದೇ, ಎಲ್ಲರೂ ಮತದಾನ ಮಾಡುವ ಮೂಲಕ ಶೇ.100ಕ್ಕೆ 100 ಮಾತದಾನ ಗುರಿ ಸಾಧಿಸಬೇಕು ಎಂದು ಮನವಿ ಮಾಡಿದರು.

ಹೊನ್ನಾಳಿ ತಹಸೀಲ್ದಾರ್ ಪುರಂದರ ಹೆಗಡೆ ಅವರು ಕಾಲೇಜಿನ ವಿದ್ಯಾರ್ಥಿಗಳನ್ನೂ ಒಳಗೊಂಡಂತೆ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಮತದಾನ ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಮತದಾರರು ಪಾಲ್ಗೊಳ್ಳುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದಂತಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಎಚ್.ನಿರಂಜನಿ ಸ್ವಾಗತಿಸಿದರು. ನ್ಯಾಮತಿ ತಹಸೀಲ್ದಾರ್ ಫಿರೋಜ್ ಷಾ, ಗ್ರೇಡ್ -2 ತಹಸೀಲ್ದಾರ್ ಗೋವಿಂದಪ್ಪ, ತಾಲೂಕು ಪಂಚಾಯಿತಿ ಇಒ ಸುಮಾ, ಬಿಇಒ ನಂಜರಾಜ್, ಬಿಆರ್‌ಸಿ ತಿಪ್ಪೇಶಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ, ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್, ಪುರಸಭ ಎಂಜಿನಿಯರ್ ದೇವರಾಜ್, ಕಂದಾಯ ಮತ್ತು ಪುರಸಭೆ ಅಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

- - - -18ಎಚ್.ಎಲ್.ಐ1:

ಹೊನ್ನಾಳಿಯಲ್ಲಿ ಗುರುವಾರ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಯಿತು.