ಸಾರಾಂಶ
ಕಳೆದ ಬಾರಿ ನಾನು ಜಯ ಗಳಿಸಿದ ಅವಧಿಯಲ್ಲಿ ವಿಧಾನ ಪರಿಷತ್‌ನಲ್ಲಿ ಪದವೀಧರರ ಅನೇಕ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ.
ಕುರುಗೋಡು: ಪದವೀಧರರ ಸಮಸ್ಯೆಗಳ ಕುರಿತು ವಿಧಾನಪರಿಷತ್‌ನಲ್ಲಿ ಚರ್ಚಿಸುವ ಅಭ್ಯರ್ಥಿಗೆ ಮತ ನೀಡಿ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ಬುಧವಾರ ಬಿಜೆಪಿ ಕಚೇರಿ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಸಭೆಯಲ್ಲಿ ಅವರು ಮಾತನಾಡಿದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನವನ್ನು ಹೆಚ್ಚಿನ ರೀತಿಯಲ್ಲಿ ಬಿಡುಗಡೆಗೊಳಿಸಿ, ಈ ಪ್ರದೇಶವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಪ್ರಯತ್ನಿಸಲಾಗುವುದು. ಕಳೆದ ಬಾರಿ ನಾನು ಜಯ ಗಳಿಸಿದ ಅವಧಿಯಲ್ಲಿ ವಿಧಾನ ಪರಿಷತ್‌ನಲ್ಲಿ ಪದವೀಧರರ ಅನೇಕ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ. ಈ ಬಾರಿಯೂ ಮತ ನೀಡಿ ಸೇವೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.
ಬಳ್ಳಾರಿ ಕ್ಷೇತ್ರದ ಮಾಜಿ ಶಾಸಕ ಜಿ.ಸೋಮಶೇಖರ್ ಮಾತನಾಡಿ, ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಹೆಚ್ಚು ಅನುಭವ ಹೊಂದಿದ್ದಾರೆ. ಅವರಿಗೆ ಮತ ನೀಡಿದರೆ ಪದವೀಧರರ ಸಮಸ್ಯೆ ಕುರಿತು ಪರಿಷತ್ನಲ್ಲಿ ಧ್ವನಿ ಎತ್ತಲಿದ್ದಾರೆ. ಹಣ ಮತ್ತು ಕೊಡುಗೆ ಆಮಿಸೆಗಳಿಗೆ ಬಲಿಯಾಗಿ ಮತ ಮಾರಾಟ ಮಾಡಿಕೊಳ್ಳದೆ ಅರ್ಹವ್ಯಕ್ತಿಗೆ ಮತ ನೀಡಿ ಎಂದು ಮನವಿ ಮಾಡಿದರು.ಕಂಪ್ಲಿ ಮಂಡಲ ಅಧ್ಯಕ್ಷ ಅಳ್ಳಳ್ಳಿ ವೀರೇಶ್ ಮತ್ತು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನೀಲ್ ಕುಮಾರ್ ಮೋಕಾ ಮಾತನಾಡಿದರು.
ಮುಖಂಡರಾದ ಚಂದ್ರಶೇಖರ್ ಅಲಗೇರಿ, ಗುತ್ತಿಗನೂರು ವಿರೂಪಾಕ್ಷ ಗೌಡ, ಉಡೇದ ಸುರೇಶ್ ಮತ್ತು ಮದಿರೆ ಕುಮಾರಸ್ವಾಮಿ ಇದ್ದರು.