ಎ.26ರಂದು ತಪ್ಪದೇ ಎಲ್ಲರೂ ಮತದಾನ ಮಾಡಿ: ಶೇಖ್ ತನ್ವೀರ್ ಆಸಿಫ್

| Published : Apr 20 2024, 01:10 AM IST

ಎ.26ರಂದು ತಪ್ಪದೇ ಎಲ್ಲರೂ ಮತದಾನ ಮಾಡಿ: ಶೇಖ್ ತನ್ವೀರ್ ಆಸಿಫ್
Share this Article
  • FB
  • TW
  • Linkdin
  • Email

ಸಾರಾಂಶ

ಮತದಾನ ಎಂಬುದು ಎಲ್ಲರ ಪ್ರಮುಖ ಹಕ್ಕು. ಇನ್ನೊಬ್ಬರನ್ನು ನೋಡಿ ಮತ ಹಾಕದೇ ಉತ್ತಮ ಭವಿಷ್ಯ ನಿರ್ಮಾಣ ಮಾಡುವಂತಹ ಹಾಗೂ ನಿಮಗೆ ಸೂಕ್ತವೆನಿಸಿದವರಿಗೆ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ 18ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಭಾಗಿಯಾಗಿ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಾರ್ವತ್ರಿಕ ಲೋಕಸಭಾ ಚುನಾವಣೆ ಏ.26ರಂದು ಜರುಗಲಿದ್ದು, ಪ್ರತಿಯೊಬ್ಬರು ಯಾವುದೇ ಆಸೆ - ಆಮಿಷಗಳಿಗೆ ಒಳಗಾಗದೇ, ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮನವಿ ಮಾಡಿದರು.

ತಾಲೂಕಿನ ಬೆಳವಾಡಿ ಗ್ರಾಮದ ಮಹಾರಾಜ ಇನ್ಸ್‌ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯ್ತಿ ವತಿಯಿಂದ ಆಯೋಜಿಸಿದ್ದ ಯುವ ಮತದಾರರ ವಿಶೇಷ ಜಾಗೃತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾನ ಎಂಬುದು ಎಲ್ಲರ ಪ್ರಮುಖ ಹಕ್ಕು. ಇನ್ನೊಬ್ಬರನ್ನು ನೋಡಿ ಮತ ಹಾಕದೇ ಉತ್ತಮ ಭವಿಷ್ಯ ನಿರ್ಮಾಣ ಮಾಡುವಂತಹ ಹಾಗೂ ನಿಮಗೆ ಸೂಕ್ತವೆನಿಸಿದವರಿಗೆ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ 18ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಭಾಗಿಯಾಗಿ ಎಂದರು.

ಈ ವೇಳೆ ಜಿಪಂ ಯೋಜನಾ ನಿರ್ದೇಶಕ ಸಂಜೀವಪ್ಪ, ತಾಪಂ ಇಒ ವೇಣು, ಬಿಇಒ ಮಹೇಶ್ ಸೇರಿದಂತೆ ಇತರರು ಇದ್ದರು.

ನಾಳೆ ನಮ್ಮ ನಡೆ ಮತಗಟ್ಟೆಯ ಕಡೆ

ಕನ್ನಡಪ್ರಭ ವಾರ್ತೆ ಮಂಡ್ಯಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಂಡ್ಯ ನಗರಸಭೆ ವ್ಯಾಪ್ತಿಯ ರೋಟರಿ ವಿದ್ಯಾಸಂಸ್ಥೆಯಲ್ಲಿ ಏ.21ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಮಟ್ಟದ ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಚುನಾವಣಾ ಧ್ವಜಾರೋಹಣ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿ ಕೆ.ಪಿ ಸಂಜೀವಪ್ಪ ತಿಳಿಸಿದ್ದಾರೆ.

ಧ್ವಜಾರೋಹಣದ ನಂತರ ರೋಟರಿ ವಿದ್ಯಾಸಂಸ್ಥೆಯ ಮುಂಭಾಗದಿಂದ (ಬೆಂಗಳೂರು - ಮೈಸೂರು ಹೆದ್ದಾರಿ ಮಾರ್ಗವಾಗಿ) ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯವರ ಕಚೇರಿ ಆವರಣದವರೆಗೆ ಬೈಕ್ ಮತ್ತು ಸೈಕಲ್ ಜಾಥಾದ ಮೂಲಕ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಏಪ್ರಿಲ್ 26ರಂದು ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಗುವುದು.‘ನಮ್ಮ ನಡೆ ಮತಗಟ್ಟೆಯ ಕಡೆ’ ಎಂಬ ಚುನಾವಣಾ ಧ್ವಜಾರೋಹಣ ಕಾರ್ಯಕ್ರಮವನ್ನು ಏಪ್ರಿಲ್ 21ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಮತಗಟ್ಟೆ ಹಂತದಲ್ಲಿ, ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ, ಅದೇ ರೀತಿ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.