ಸಾರಾಂಶ
ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗಬೇಕು. ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮೇ ೭ರಂದು ತಪ್ಪದೇ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಹೇಳಿದರು. ತಾಲೂಕಿನ ಸಂಗೂರ ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಪ್ರಸ್ತುತ ವರ್ಷ ತಾಲೂಕಿನಲ್ಲಿ ಅತ್ಯಧಿಕ ತಾಪಮಾನ ಉಂಟಾಗಿದ್ದು ಕಾರಣ ಕೆಲಸದ ಸಮಯದಲ್ಲಿ ರಿಯಾಯಿತಿ ನೀಡಲಾಗಿದೆ. ಕಾರ್ಮಿಕರು ಬಿಸಿಲಿನ ತಾಪಮಾನ ಹೆಚ್ಚುವ ಮುನ್ನ ನಿಗದಿತ ಕೆಲಸ ಮುಗಿಸಿಕೊಂಡು ತೆರಳಬೇಕು, ತಾಪಮಾನ ಹೆಚ್ಚಾಗಿದ್ದರಿಂದ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕಾರಣ ಪ್ರತಿಯೊಬ್ಬ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಸಲಹೆ ನೀಡಿದರು.ಕೂಲಿಕಾರರ ಅವಶ್ಯಕತೆಗೆ ತಕ್ಕಂತೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಇನ್ನು ಹೆಚ್ಚಿನ ಕಾಮಗಾರಿಗಳನ್ನು ಅನುಷ್ಠ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಎಸ್.ಆರ್.ಬಾರ್ಕಿ, ಕಾರ್ಯದರ್ಶಿ ಶಂಕರ್ ಹೊನ್ನತ್ತಿ, ಮಾಹಿತಿ ಶಿಕ್ಷಣ ಸಂಯೋಜಕರು, ಸಿಬ್ಬಂದಿ ಪಾಲ್ಗೊಂಡಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))