ನಿರ್ಭೀತಿಯಿಂದ ಮತ ಚಲಾಯಿಸಿ: ಕಾವ್ಯಾರಾಣಿ

| Published : Apr 23 2024, 12:46 AM IST

ಸಾರಾಂಶ

ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಕಾವ್ಯರಾಣಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಕಾವ್ಯರಾಣಿ ಹೇಳಿದರು.

ಹುಣಸಗಿ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಭಾಗ ಸಂಖ್ಯೆ 72ರಲ್ಲಿ ಮತದಾರರನ್ನುದ್ದೇಶಿಸಿ ಅವರು ಮಾತನಾಡಿದರು.

ವಿಶ್ವದ ಅನೇಕ ದೇಶಗಳ ಚುನಾವಣಾ ವ್ಯವಸ್ಥೆಗಿಂತ ಬಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯದ್ಭುತವಾಗಿದೆ. ನನ್ನ ಮತ, ನಮ್ಮ ಹಕ್ಕು, ಪ್ರಜಾಪ್ರಭುತ್ವ ಉಳಿವಿಗೆ ಸಾಕ್ಷಿಯಾಗಲಿದೆ ಎಂದು ಅವರು ಹೇಳಿದರು.

ಮತಗಟ್ಟೆಯಲ್ಲಿ ದಿವ್ಯಾಂಗರಿಗೆ ಅನುಕೂಲವಾಗುವ ಮತಗಟ್ಟೆಯ ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಸೇರಿ ಮೂಲ ಭೂತ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.

ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ, ಸಿಪಿಐ ಸಚಿನ್ ಚಲುವಾದಿ, ತಾಲೂಕು ನೋಡಲ್ ಅಧಿಕಾರಿ ಬಸವರಾಜಸ್ವಾಮಿ ಹಿರೇಮಠ, ಪಿಎಸೈ ಸಂಗೀತಾ ಸಿಂಧೆ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೆಂಕಟೇಶ ತೇಲಂಗ ಸೇರಿದಂತೆ ಇತರರಿದ್ದರು.