ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಿ: ಪಾಲಿಕೆ ಆಯುಕ್ತ ಆನಂದ್‌

| Published : Mar 27 2024, 01:06 AM IST

ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಿ: ಪಾಲಿಕೆ ಆಯುಕ್ತ ಆನಂದ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್‌, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಮತದಾನ ಜಾಗೃತಿ ಅಭಿಯಾನ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಯಾವುದೇ ಭಯವಿಲ್ಲದೆ, ಪ್ರಭಾವಕ್ಕೆ ಒಳಪಡದೆ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಮಂಗಳೂರು ಪಾಲಿಕೆ ಆಯುಕ್ತ ಆನಂದ್‌ ಸಿ.ಎಲ್‌. ಹೇಳಿದರು.ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್‌, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಬಾರಿಯ ಚುನಾವಣೆಯಲ್ಲಿ ವ್ಯಾಪಕ ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ನಗರದ ಹಲವು ಕಡೆ ಸ್ವೀಪ್‌ ಸಮಿತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಚುನಾವಣೆ ದಿನ ಎಲ್ಲರೂ ಉತ್ಸುಕತೆಯಿಂದ ಮತದಾನಕ್ಕೆ ಆಗಮಿಸಬೇಕು. ಸುಸೂತ್ರವಾಗಿ ಚುನಾವಣೆ ನಡೆಯಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ದ.ಕ. ಬುದ್ಧಿವಂತರ ಜಿಲ್ಲೆಯಾಗಿದೆ. ಈ ಬಾರಿಯ ಚುನಾವಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರು ಬಂದು ಬುದ್ಧಿವಂತಿಕೆ ಪ್ರದರ್ಶಿಸಬೇಕಿದೆ ಎಂದರು.ಸಂತ ಆಗ್ನೇಸ್‌ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳಿಂದ ಕಿರು ನಾಟಕ ಪ್ರದರ್ಶಿಸಲಾಯಿತು.

ಮಂಗಳೂರು ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಮತ್ತಿತರರು ಇದ್ದರು.