ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ: ನ್ಯಾ.ವಿಶ್ವನಾಥ

| Published : Jan 26 2024, 01:46 AM IST

ಸಾರಾಂಶ

ಮತದಾನ ಹಕ್ಕು ಪಡೆದ ಪ್ರತಿ ನಾಗರಿಕರು ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಿದೆ. ಮತದಾನ ವೇಳೆ ಆಸೆ, ಆಮಿಷಗಳಿಗೆ ಒಳಗಾಗದೆ ನಿಮಗೆ ಯಾವ ಅಭ್ಯರ್ಥಿ ಸೂಕ್ತವೋ ಆ ಅಭ್ಯರ್ಥಿಗೆ ಮತ ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ಎತ್ತಿ ಹಿಡಿಯಬೇಕು.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಮತದಾನ ಹಕ್ಕು ಪಡೆದ ಪ್ರತಿ ನಾಗರಿಕರು ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಿದೆ ಎಂದು ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ ಮೂಗತಿ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವಕರ ದಿನ, ಮತದಾರರ ದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ ಮತದಾನ ವೇಳೆ ಆಸೆ, ಆಮಿಷಗಳಿಗೆ ಒಳಗಾಗದೆ ನಿಮಗೆ ಯಾವ ಅಭ್ಯರ್ಥಿ ಸೂಕ್ತವೋ ಆ ಅಭ್ಯರ್ಥಿಗೆ ಮತ ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ಎತ್ತಿ ಹಿಡಿಯಬೇಕು ಎಂದು ಯುವ ಮತದಾರರಿಗೆ ಕರೆ ನೀಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಸಿದ್ದಲಿಂಗಯ್ಯ ಗಂಗಾಧರ ಮಠ ಮಾತನಾಡಿ ಮತದಾರರ ದಿನಾಚರಣೆ ಏಕೆ ಮಾಡುತ್ತೇವೆ ಎಂದರೆ ಮತದಾನದ ಮಹತ್ವವನ್ನು ಯುವ ಮತದಾರರು ತಿಳಿದು ನ್ಯಾಯ ಸಮ್ಮತ ಮತದಾನ ಮಾಡಿ ಪ್ರಜಾಪ್ರಭುತ್ವದ ಮೂಲ ಆಶಯ ಈಡೇರಿಸಬೇಕಿದೆ ಎಂದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ತಹಸೀಲ್ದಾರ್ ಎರ್ರಿಸ್ವಾಮಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಡಿವೈಎಸ್.ಪಿ ಪ್ರಶಾಂತ್ ಮುನ್ನೋಳಿ, ವಕೀಲರ ಸಂಘದ ಅಧ್ಯಕ್ಷ ಎಂ.ರಾಜಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಲ್.ಸರಿತಾ, ವಕೀಲರ ಸಂಘದ ಉಪಾಧ್ಯಕ್ಷ ಬಾಬು ಜಾನ್, ಕಾರ್ಯದರ್ಶಿ ಜಗದೀಶ್, ಶಿರಾಸ್ತೇದಾರ್ ಅರುಣ್ ಕುಮಾರ್ ಇತರರಿದ್ದರು.