ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ

| Published : Apr 05 2024, 01:10 AM IST

ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಮತದಾನ ಪ್ರಜಾಪ್ರಭುತ್ವದ ಹಕ್ಕು. ಅದನ್ನು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸರಿಯಾದ ರೀತಿಯಲ್ಲಿ ಮತ ಚಲಾಯಿಸೋಣ.

ಹುಬ್ಬಳ್ಳಿ:

ಮತದಾನ ಎಲ್ಲರ ಹಕ್ಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮೇ 7ರಂದು ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.

ಇಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಮತದಾನ ಜಾಥಾ ಅಂಗವಾಗಿ ಸ್ತಬ್ಧ ಚಿತ್ರ ಹಾಗೂ ವಿಡಿಯೋ ವಾಹನ ಅನಾವರಣ ಕಾರ್ಯಕ್ರಮವನ್ನು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾನ ಪ್ರಜಾಪ್ರಭುತ್ವದ ಹಕ್ಕು. ಅದನ್ನು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸರಿಯಾದ ರೀತಿಯಲ್ಲಿ ಮತ ಚಲಾಯಿಸೋಣ ಎಂದರು.

ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಮತದಾರರ ಸಂಖ್ಯೆ ಕಡಿಮೆ ಇದೆ. ಎಲ್ಲೆಲ್ಲಿ ಮತದಾರರು ಕಡಿಮೆ ಇದ್ದಾರೆ. ಅಲ್ಲಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ ಅವರನ್ನು ಮತಗಟ್ಟೆಗಳಿಗೆ ಕರೆತರಲಾಗುವುದು ಎಂದ ಅವರು, ಮತದಾನ ಜಾಗೃತಿ ಜಾಥಾ 82 ವಾರ್ಡ್‌ಗಳಿಗೂ ತೆರಳಿ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವೇಟಿಂಗ್ ಹಾಲ್, ಅಂಗವಿಕಲರಿಗೆ ವ್ಹೀಲ್‌ಚೇರ್‌, ಬ್ರೈಡ್ ಲಿಪಿಯ ವ್ಯವಸ್ಥೆಯನ್ನೂ ಚುನಾವಣಾ ಆಯೋಗ ಮಾಡಿದೆ ಎಂದರು.

ಜಿಪಂ ಸಿಇಒ ಸ್ವರೂಪಾ ಟಿ.ಕೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಕಲಗೌಡ ಪಾಟೀಲ್, ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.