ಸಾರಾಂಶ
ಭಾರತವು ಬೃಹತ್ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾನ ದೇಶದ ಭದ್ರ ಬುನಾದಿಗೆ ಅಡಿಪಾಯವಾಗುತ್ತದೆ. ಪ್ರಜಾಪ್ರಭುತ್ವದ ಬಲಿಷ್ಠತೆಗೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಪಂ ಪಿಡಿಒ ಸೆಲ್ವರಾಜ್ ಹೇಳಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ ಭಾರತವು ಬೃಹತ್ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾನ ದೇಶದ ಭದ್ರ ಬುನಾದಿಗೆ ಅಡಿಪಾಯವಾಗುತ್ತದೆ. ಪ್ರಜಾಪ್ರಭುತ್ವದ ಬಲಿಷ್ಠತೆಗೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಪಂ ಪಿಡಿಒ ಸೆಲ್ವರಾಜ್ ಹೇಳಿದರು.ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಪಂ ಕಚೇರಿಯಲ್ಲಿ ಇಂದು ಜಿಲ್ಲಾ ಡಳಿತ, ಜಿಪಂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಹನೂರು ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ. 26ರಂದು ಮತದಾನ ನಡೆಯಲಿದೆ. ಅಂದು ಅರ್ಹರೆಲ್ಲರೂ ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ನಿಮಗೆ ನೆರವಾಗುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತಚಲಾಯಿಸಬೇಕು. ಮತದಾನ ನಿಮ್ಮ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಕೆಂಪಯ್ಯನಹಟ್ಟಿ ಗ್ರಾಮದ ಶಾಲೆಯ ಮಕ್ಕಳು ಕಡ್ಡಾಯವಾಗಿ ಮತದಾನ ಮಾಡುವಂತೆ ಅವರ ತಂದೆ ತಾಯಿಗಳಿಗೆ ಮತದಾನದ ಮಮತೆಯ ಕರೆಯೋಲೆ ಪತ್ರ ಗಮನ ಸೆಳೆಯಿತು.
ಈ ವೇಳೆ ಮತದಾನ ಜಾಗೃತಿಯ ಬಗ್ಗೆ ವಿಡಿಯೋ ಮತ್ತು ಜಿಂಗಲ್ಸ್‌ಗಳ ಮೂಲಕ ಸಾರ್ವಜನಿಕರಿಗೆ ಮತ ಚಲಾವಣೆಯ ಮಹತ್ವದ ತಿಳುವಳಿಕೆ ನೀಡಲಾಯಿತು.ಈ ಸಂಧರ್ಭದಲ್ಲಿ ಗ್ರಾಪಂ ಆನಂದ, ಕುಮಾರ, ಬಿ.ಎಫ್.ಟಿ ಕೃಷ್ಣಸ್ವಾಮಿ ಶಾಲಾ ಶಿಕ್ಷಕರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಜರಿದ್ದರು.