ಮತದಾರರ ಕೃತಜ್ಞತಾ ಸಮಾರಂಭ ಇಂದು

| Published : Jul 10 2024, 12:39 AM IST

ಸಾರಾಂಶ

ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ನೂತನ ಸಂಸದ ಸುನಿಲ್ ಬೋಸ್ ಅವರನ್ನು ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಲ್ಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಟಿ. ನರಸೀಪುರ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವನ್ನು ನೀಡಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಜು.10ರ ಬುಧವಾರ 11ಕ್ಕೆ ಅಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೃಹತ್ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ಬಸವರಾಜು ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಪ್ರಥಮ ಸ್ಪರ್ಧೆಯಲ್ಲಿಯೇ ಸುನಿಲ್ ಬೋಸ್ ಅವರನ್ನು ಚುನಾಯಿಸುವ ಮೂಲಕ ಬಿಜೆಪಿಯ ಹಿಡಿತದಲ್ಲಿದ್ದ ಲೋಕಸಭಾ ಕ್ಷೇತ್ರವನ್ನು ಚಾಮರಾಜನಗರ ಮತದಾರರು ಮರಳಿ ಕೈಗೆ ನೀಡಿರುವುದರಿಂದ ಅವರಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಬೇಕಾದದ್ದು ಪಕ್ಷದ ಜವಾಬ್ದಾರಿಯಾಗಿದೆ ಎಂದರು.

ಮತದಾರರ ಕೃತಜ್ಞತಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಚಾಮರಾಜನಗರ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ರವಿಶಂಕರ್ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ನರಸೀಪುರ ಕ್ಷೇತ್ರದಿಂದಲೂ 10 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ನೂತನ ಸಂಸದ ಸುನಿಲ್ ಬೋಸ್ ಅವರನ್ನು ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಲ್ಲಿಸಲಿದ್ದಾರೆ. ಕಾರ್ಯಕ್ರಮಕ್ಕೆ ತೆರಳಲು ಕಾರ್ಯಕರ್ತರಿಗೆ ಹೋಬಳಿ ವ್ಯಾಪ್ತಿ ಬಸ್ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೆಪಿಸಿಸಿ ಸದಸ್ಯ ಸುಂದರ ನಾಯಕ, ಬನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚನ್ನಕೇಶವ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್. ಉಮೇಶ್, ಮಾಜಿ ಉಪಾಧ್ಯಕ್ಷ ಪ್ರಸನ್ನ, ಮಾಜಿ ಸದಸ್ಯರಾದ ಕೆ.ಎಸ್. ಗಣೇಶ್, ರಾಮಲಿಂಗಯ್ಯ, ರಂಗಪ್ಪ, ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಜೆ. ಶಿವಸ್ವಾಮಿ, ಸಹಾಯಕ ಪ್ರಾಧ್ಯಾಪಕ ಡಾ.ಬಿ.ಕೆ. ಜ್ಞಾನಪ್ರಕಾಶ್, ಮಾಜಿ ಪ್ರಧಾನ ಹೆಮ್ಮಿಗೆ ಶೇಷಾದ್ರಿ, ಸೋಮಣ್ಣ, ಪುರಸಭಾ ಸದಸ್ಯ ಮಂಜು, ಶಿವಶಂಕರ್, ಸಿದ್ದಶೆಟ್ಟಿ ಭಾಗವಹಿಸಿದ್ದರು.