ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಕೊರಟಗೆರೆ ತಾಲೂಕು ಬಿ.ಡಿ.ಪುರ ಗ್ರಾಮ ಪಂಚಾಯಿತಿ ಚಟ್ಟೇನಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ “ನರೇಗಾ ಕೂಲಿ ಕಾರ್ಮಿಕರಿಗೆ ಮತದಾನದ ಅರಿವು” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಇದೇ ಸಂದರ್ಭದಲ್ಲಿ ಮತನಾಡಿದ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ ಅನಂತರಾಮು, ಎಲ್ಲಾ ನರೇಗಾ ಕಾರ್ಮಿಕರು ಏಪ್ರಿಲ್ 26 ರಂದು ತಮ್ಮ ತಮ್ಮ ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.ತಾಲೂಕಿನಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ನಿಗದಿತ 4.38 ಲಕ್ಷ ಮಾನವ ದಿನಗಳ ಗುರಿಗೆ ಅನುಗುಣವಾಗಿ 5.33 ಲಕ್ಷ, ಮಾನವ ದಿನಗಳ ಸೃಜನೆ ಮಾಡಿ ಜಿಲ್ಲೆಯಲ್ಲಿ 3ನೇ ಸ್ಥಾನವನ್ನುತಲುಪಿರುತ್ತೇವೆ. ಆದರೇ ಶಾಲಾ ಸಮಗ್ರಅಭಿವೃದ್ಧಿ ಕಾಮಗಾರಿಗಳ ಪ್ರಗತಿ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಾಗಿಲ್ಲ. ಈಗಾ ಗಲೇ ಆರಂಭವಾಗಿರುವ ಶಾಲಾಭಿವೃದ್ಧಿ ಕಾಮಗಾರಿಗಳನ್ನು ಏಪ್ರಿಲ್ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಕುಮಾರ್, ನರೇಗಾ ಸಹಾಯಕ ನಿರ್ದೇಶಕ ಗುರುಮೂರ್ತಿಎಂ.ಬಿ, ತಾಂತ್ರಿಕ ಸಂಯೋಜಕ ಮಧು, ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ನರೇಗಾತಾಂತ್ರಿಕ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಬಿ.ಡಿ. ಪುರ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.