ಕ್ಯಾಂಡಲ್ ಮಾರ್ಚ್‌ ಮೂಲಕ ಮತದಾರರ ಜಾಗೃತಿ

| Published : Apr 05 2024, 01:11 AM IST

ಸಾರಾಂಶ

ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ಲೋಕಸಭಾ ಚುನಾವಣೆ 2024 ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕ್ಯಾಂಡಲ್ ಮಾರ್ಚ್‌ ಜರುಗಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ಲೋಕಸಭಾ ಚುನಾವಣೆ 2024 ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕ್ಯಾಂಡಲ್ ಮಾರ್ಚ್‌ ಜರುಗಿತು.

ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಕುವರಿ ಶ್ರೇಯಾಂಕ ಪಾಟೀಲ್ ಅವರು ಭಾಗವಹಿಸಿದ್ದರು.

ಜಿಪಂ ಸಿಇಓ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಭಂವರ ಸಿಂಗ್ ಮೀನಾ ಅವರು ಮಾತನಾಡಿ, ಮತದಾನ ಅಭಿಯಾನಕ್ಕೆ ತಾವೆಲ್ಲರೂ ಸಹಕರಿಸಬೇಕು. ಇನ್ನೂ ಏ.10ರ ವರೆಗೆ ತಮ್ಮ ಹೆಸರು ಆನ್‍ಲೈನ್ ನೋಂದಾಯಿಸಿ ಓಟರ್ ಐಡಿ ಪಡೆದು ಮತದಾನ ಮಾಡಬಹುದು ಎಂದರು.

ಮೇ 7ರಂದು ಮತದಾನ ನಡೆಯಲಿದೆ. ಮತದಾನ ಮಾಡುವ ಯಾವುದೇ ವ್ಯಕ್ತಿಗಳು ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ವಿದ್ಯಾರ್ಥಿಗಳು 18 ವರ್ಷ ತುಂಬಿದ ಮಕ್ಕಳಿಗೆ ಮತದಾನ ಮಾಡಬೇಕು. ಪ್ರತಿಯೊಬ್ಬರು ನಾಗರಿಕರು ಮತದಾನ ಜಾಗೃತಿ ಮೂಡಿಸಬೇಕು ಎಂದರು ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಮಾಡಬೇಕು ಮತದಾನ ದಿನ ರಜೆ ಇದೆ ಬೇರೆ ಊರುಗಳಿಗೆ ಹೋಗಕೂಡದು ತಪ್ಪದೇ ಮತದಾನ ಮಾಡಿ ಎಂದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮತದಾರರ ಪ್ರತಿಜ್ಞೆ ವಿಧಿ ಬೋಧಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಅವರಣ ಮುಂದು ಗಡೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ಯಾಂಡಲ್ ಪಥ ಸಂಚಲನ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಎಸ್.ಪಿ. ಅಕ್ಷಯ ಹಾಕೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ, ಉಪ ಆಯುಕ್ತರಾದ ಮಾಧವ ಗಿತ್ತೆ, ಕೃಷಿ ಇಲಾಖೆಯ ಜಂಟಿ ನಿರ್ದೇಶ ಸಮ್ಮದ ಪಟೇಲ್, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಶಾಲಾ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.