ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಡಿ ರೂಪ ಹೇಳಿದರು.ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು 2011ರಿಂದ ಪ್ರತಿ ವರ್ಷ ಜ.25ರಂದು ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವುದು ಇದರ ಉದ್ದೇಶವಾಗಿದೆ ಎಂದರು.ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆ. ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ ಎಂದರು.
ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳಿವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದರು.ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
ಕೃಷಿ ವಿವಿ ಸ್ಥಾಪನೆ: ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಅಭಿನಂದನೆಮಂಡ್ಯ: ಕೃಷಿ ವಿಶ್ವವಿದ್ಯಾಲಯಕ್ಕೆ ಅನುಮೋದನೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣರಾಗಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಜಿಲ್ಲೆಯ ಪರವಾಗಿ ಅಭಿನಂದಿಸುವುದಾಗಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್.ಮಂಜುನಾಥ್‌ಗೌಡ ತಿಳಿಸಿದರು. ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಅವರು, ಸಚಿವರು ಜಿಲ್ಲೆಯ ಮೈಷುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಗೊಳಿಸಿ, ವಿಜೃಂಭಣೆಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿದ್ದಲ್ಲದೆ ಜಿಲ್ಲೆಯ ಕೃಷಿಕರ ಬಹುದಿನದ ಕನಸಾದ ಕೃಷಿ ವಿಶ್ವವಿದ್ಯಾಲಯವನ್ನು ನನಸು ಮಾಡುವ ಹಂತಕ್ಕೆ ತರಲು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದರು. ಮೈಸೂರು ವಿಭಾಗದಲ್ಲಿ ಇದೇ ಮೊದಲ ಕೃಷಿ ವಿಶ್ವವಿದ್ಯಾಲಯವಾಗಲಿದ್ದು, ಸದರಿ ವಿಶ್ವವಿದ್ಯಾಲಯಕ್ಕೆ ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಹಾಸನ ಕೃಷಿ ಕಾಲೇಜು ಹಾಗೂ ಮೈಸೂರಿನ ತೋಟಗಾರಿಕೆ ಕಾಲೇಜು ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಜಿಲ್ಲಾಧ್ಯಕ್ಷ ಸಿ.ಎಂ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಉಪಾಧ್ಯಕ್ಷ ಜಿ. ಧನಂಜಯ, ಕೆ.ಜಿ.ನಾಗರಾಜ್, ವೆಂಕಟೇಶ್, ಪಿ. ಬಾಲಕೃಷ್ಣ ಗೋಷ್ಠಿಯಲ್ಲಿದ್ದರು.