ಸಾರಾಂಶ
- ಪಾರ್ಲಿಮೆಂಟ್‌ನಲ್ಲಿ ರಾಜ್ಯ ಪರವಾಗಿ ದನಿಯೆತ್ತದ ಸಂಸದ ಸಿದ್ದೇಶ್ವರ: ಆರೋಪ- - -
ಕನ್ನಡಪ್ರಭ ವಾರ್ತೆ, ಹೊನ್ನಾಳಿಜಿಲ್ಲೆಯ 7 ಕ್ಷೇತ್ರಗಳಲ್ಲಿ ಜಿಲ್ಲೆಯ ಜನತೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಬಡವರು, ಮಧ್ಯಮ ವರ್ಗದವರು ನೆಮ್ಮದಿಯಿಂದ ಜೀವನ ನಡೆಸುವುದಾಕ್ಕಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಬೇಕಾದ ಜವಾಬ್ದಾರಿ ಮತದಾರರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಭಾನುವಾರ ಹೊನ್ನಾಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಕ್ಕಾಗಿ ಪಾರ್ಲಿಮೆಂಟ್‌ನಲ್ಲಿ ಹಿಂದಿನ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಒಮ್ಮೆಯಾದರೂ ಧ್ವನಿ ಎತ್ತಲಿಲ್ಲ. ಇವರೊಬ್ಬ ಅಸಮರ್ಥ ಸಚಿವ ಎಂದು ಕೇಂದ್ರದ ಸಚಿವ ಸಂಪುಟದಿಂದ ಕೈ ಬಿಡಲಾಗಿತ್ತು. ಜಿಲ್ಲೆಯಲ್ಲಿ ಆಗಬೇಕಾದ ಹಲವಾರು ಅಭಿವೃದ್ಧಿ ಕೆಲಸಗಳು ನನೆಗುದಿಗೆ ಬಿದ್ದಿವೆ. ರಸ್ತೆಗಳು, ಹೊನ್ನಾಳಿ ಕ್ಷೇತ್ರದ ಚೀಲೂರು-ರಾಂಪುರ ನಡುವೆ ಸೇತುವೆ ನಿರ್ಮಾಣ, ಹರಿಹರ -ಶಿವಮೊಗ್ಗ ರೇಲ್ವೆ ಸಂಪರ್ಕ ಸೇರಿದಂತೆ ಅನೇಕ ಕೆಲಸಗಳು ಇನ್ನೂ ಕೂಡ ಮಾಡಲಾಗಿಲ್ಲ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದು, ಕಾಂಗ್ರೆಸ್‌ಗೆ ಮತ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಕೂಡ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯಲ್ಲಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಸಹಿ ಮಾಡಿದ 5 ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ, ನಂತರ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ 5 ಗ್ಯಾರಂಟಿಗಳನ್ನು ಹಂತ ಹಂತವಾಗಿ ಜಾರಿಗೆ ತರುವ ಮೂಲಕ ಕಾಂಗ್ರೆಸ್ ತಾನು ನುಡಿದಂತೆ ನಡೆದು ತೋರಿಸಿದೆ. ಇದೀಗ ಲೋಕಸಭಾ ಚುನಾವಣೆಯಲ್ಲಿ ಕೂಡ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇದೇ ರೀತಿ ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ, ಮತಯಾಚನೆ ಮಾಡಲಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಡವರಿಗೆ ನೀಡಿರುವ ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ಹಿರಿಯ ಮುಖಂಡ ಬಿ.ಸಿದ್ದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರಿ ಕಂಬಳಿ ಹೊದಿಸಿ ಸನ್ಮಾನಿಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಸ್ವಾಗತಿಸಿದರು. ಕೆಪಿಸಿಸಿ ಸದಸ್ಯ ಡಾ. ಈಶ್ವರ ನಾಯ್ಕ, ಜಿ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ಮಾತನಾಡಿದರು. ಮಾಯಕೊಂಡ ಶಾಸಕ ಬಸವಂತಪ್ಪ, ವಿಧಾನ ಪರಿಷತ್ತು ಮಾಜಿ ಸದಸ್ಯ ಆಯನೂರು ಮಂಜನಾಥ್, ಆರ್.ಶಂಕರ್, ಶಾಸಕ ಶ್ರಿನಿವಾಸ, ತಾ. ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಶಿವಯೋಗಿ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಮಾಜಿ ಶಾಸಕ ಡಾ. ಡಿ.ಬಿ. ಗಂಗಪ್ಪ, ನ್ಯಾಮತಿ ವಾಗೀಶ್, ಆರ್.ನಾಗಪ್ಪ, ಸಣ್ಣಕ್ಕಿ ಬಸವನಗೌಡ, ಹನುಮನ ಹಳ್ಳಿ ಬಸವರಾಜಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಸ್. ಸುರೇಂದ್ರಗೌಡ, ಎಚ್.ಎ. ಗದ್ದಿಗೇಶ್, ಯುವ ಕಾಂಗ್ರೆಸ್ ಮುಖಂಡರು, ಇನ್ನಿತರರು ಭಾಗವಹಿಸಿದ್ದರು.
- - --5ಎಚ್.ಎಲ್.ಐ1: ಹೊನ್ನಾಳಿಯಲ್ಲಿ ಪ್ರಜಾಧ್ವ ನಿ ಸಮಾವೇಶದಲ್ಲಿ ಸಿ.ಎಂ. ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಕ್ಷೇತ್ರದ ಜನತೆ ಕರಿಯ ಕಂಬಳಿ ಹೊದಿಸಿ ಸನ್ಮಾನಿಸಿದರು.
-5ಎಚ್.ಎಲ್ಐ,1ಎ.: ಹೊನ್ನಾಳಿಯಲ್ಲಿ ಕಾಂಗ್ರೆನ್ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ , ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಇತರ ಮುಖಂಡರು ಇದ್ದರು.-5ಎಚ್.ಎಲ್.ಐ1ಬಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜಾಧ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.