ಸಾರಾಂಶ
ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿ ಪುನಃ ಬಿಜೆಪಿ ಪಕ್ಷಕ್ಕೆ ಜಯ ಸಿಗುವುದು ಖಂಡಿತ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಚಿತ್ರದುರ್ಗ: ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿ ಪುನಃ ಬಿಜೆಪಿ ಪಕ್ಷಕ್ಕೆ ಜಯ ಸಿಗುವುದು ಖಂಡಿತ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸಿರಿಗೆರೆಯಲ್ಲಿ ಗುರುವಾರ ಸಂಜೆ ಮಾಧ್ಯಮದವರೊಡನೆ ಮಾತನಾಡಿದ ಅವರು ಈಗಾಗಲೇ ಒಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸುತ್ತುಹಾಕಿದ್ದೇವೆ. ಎಲ್ಲೆಡೆ ಬಿಜೆಪಿ ಬಗ್ಗೆ ಮತದಾರರಲ್ಲಿ ಒಲವು ಇದೆ ಎಂದರು.ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾರ್ಯಕರ್ತರು ಬಹಳ ಆಸಕ್ತಿಯಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡು ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ೧೦ ವರ್ಷಗಳಲ್ಲಿ ಜಾರಿಗೆ ತಂದಿರುವ ಕಾರ್ಯಕ್ರಮಗಳು ಗೆಲುವಿಗೆ ಆಸರೆಯಾಗಿವೆ. ಜನರು ದೇಶದ ಸುಭದ್ರತೆ ಮತ್ತು ರಕ್ಷಣೆಯ ಕುರಿತು ಆಲೋಚಿಸುತ್ತಿದ್ದಾರೆ ಎಂದರು. ಪ್ರಧಾನಿ ಮೋದಿಯವರ ವರ್ಚಸ್ಸು, ಪಕ್ಷದ ಸಿದ್ಧಾಂತ ಇವುಗಳು ನನ್ನ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.