ಸಾರಾಂಶ
ಏಪ್ರಿಲ್ 26 ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಅರ್ಹ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತ ಹಾಕುವ ಮೂಲಕ ಸಂವಿಧಾನ ನಮಗೆ ನೀಡಿರುವ ಹಕ್ಕುನ್ನು ಚಲಾಯಿಸಬೇಕೆಂದು ತಹಸೀಲ್ದಾರ್ ಸ್ಮಿತಾರಾಮು ತಿಳಿಸಿದರು.
ಕನಕಪುರ: ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಮ್ಮ ಸಂವಿಧಾನದ ಮೂಲಕ ನಮಗೆ ನೀಡಿರುವ ಮತದಾನದ ಹಕ್ಕನ್ನು ಅರ್ಹ ಪ್ರತಿಯೊಬ್ಬ ವ್ಯಕ್ತಿಯೂ ಚಲಾಯಿಸುವಂತೆ ತಹಸೀಲ್ದಾರ್ ಸ್ಮಿತಾರಾಮು ತಿಳಿಸಿದರು. ನಗರದ ರೂರಲ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ತಾಪಂ ಸಹಯೋಗ ದೊಂದಿಗೆ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಏಪ್ರಿಲ್ 26 ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಅರ್ಹ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತ ಹಾಕುವ ಮೂಲಕ ಸಂವಿಧಾನ ನಮಗೆ ನೀಡಿರುವ ಹಕ್ಕುನ್ನು ಚಲಾಯಿಸಬೇಕೆಂದು ತಿಳಿಸಿದರು. ರೂರಲ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರೊ. ಮಂಜುನಾಥ್ ನೇತೃತ್ವದಲ್ಲಿ ವಿಧ್ಯಾರ್ಥಿಗಳು ಬೈಕ್ ರ್‍ಯಾಲಿ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು, ತಾಲೂಕು ಪಂಚಾಯಿತಿ ಇ.ಒ.ಮೋಹನ್ ಬಾಬು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಕಾಲೇಜು ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.