ಬೆಂಡಬೆಂಬಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ

| Published : Apr 03 2024, 01:32 AM IST

ಸಾರಾಂಶ

ಬೆಂಡೆಬೆಂಬಳಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಕನ್ನಡಪ್ರಭ ವಾರ್ತೆ ಯಾದಗಿರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 7ರಂದು ನಡೆಯುವ ಮತದಾನದ ಹಿನ್ನೆಲೆ, ಸಮೀಪದ ಬೆಂಡೆಬೆಂಬಳಿ ಗ್ರಾಮ ಪಂಚಾಯ್ತಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಯಾದಗಿರಿ, ತಾಲೂಕು ಪಂಚಾಯ್ತಿ ವಡಗೇರಾ ಹಾಗೂ ತಾಲೂಕು ಸ್ವೀಪ್ ಸಮಿತಿ ವಡಗೇರಾ ಮತ್ತು ಬೆಂಡೆಬೆಂಬಳಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ನಾನಾ ತರಹದ ಹಲವು ಬಣ್ಣಗಳ ಚಿತ್ತಾಕರ್ಷಣಿಯ ಮತದಾನ ಜಾಗೃತಿಯ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವೀತಿಯ ಹಾಗೂ ತೃತೀಯ ಬಹುಮಾನ ವಿತರಿಸಲಾಯಿತು.

ಬಳಿಕ, ಲಿಂಗತ್ವ ದೌರ್ಜನ್ಯ ತಡೆ ಹಾಗೂ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ, ಒಕ್ಕೂಟದವರು ನೇತೃತ್ವದಲ್ಲಿ ಜಾಗೃತಿ ವಾಹಿನಿಯ ಧ್ವನಿವರ್ಧಕ ಮೂಲಕ ಭಾರತ ಕುರಿತ ಮತದಾನ ಜಾಗೃತಿ ಹಾಡಿನೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಕೈಗೊಂಡು ಗ್ರಾಮಸ್ಥರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.

ಮಲ್ಲಿಕಾರ್ಜುನ ಸಂಗ್ವಾರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.