ಕಲ್ಯಾಣ ಮಂಟಪದಲ್ಲಿ ಮತದಾನ ಜಾಗೃತಿ, ಪ್ರತಿಜ್ಞಾವಿಧಿ

| Published : Mar 30 2024, 12:52 AM IST

ಕಲ್ಯಾಣ ಮಂಟಪದಲ್ಲಿ ಮತದಾನ ಜಾಗೃತಿ, ಪ್ರತಿಜ್ಞಾವಿಧಿ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‌ಪೇಟೆ: ಚುನಾವಣಾ ಆಯೋಗ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭಕ್ಕೆ ಆಗಮಿಸಿದವರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.

ದಾಬಸ್‌ಪೇಟೆ: ಚುನಾವಣಾ ಆಯೋಗ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭಕ್ಕೆ ಆಗಮಿಸಿದವರಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಶಿಶು ಅಭಿವೃದ್ದಿ ಯೋಜನಾಧಿಕಾರಿ ನಾಗೇಶ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು. ಮತದಾನದಿಂದ ದೂರ ಉಳಿಯಬೇಡಿ, ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸಬೇಕು ಎಂದರು. ಬಳಿಕ ವಧು-ವರರಿಗೆ ಹಾಗೂ ಮದುವೆಗೆ ಹಾಜರಾದವರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಿಯರಾದ ಹೇಮಾ, ವಿಜಯಲಕ್ಷ್ಮೀ, ಸಿಬ್ಬಂದಿ ವರ್ಗ, ಇತರರು ಹಾಜರಿದ್ದರು.ಪೋಟೋ 4 : ನೆಲಮಂಗಲ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭಕ್ಕೆ ಆಗಮಿಸಿದವರಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಶಿಶು ಅಭಿವೃದ್ದಿ ಯೋಜನಾಧಿಕಾರಿ ನಾಗೇಶ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಿಯರಾದ ಹೇಮಾ, ವಿಜಯಲಕ್ಷ್ಮೀ, ಸಿಬ್ಬಂದಿ ವರ್ಗ, ಇತರರು ಹಾಜರಿದ್ದರು.