ಸೈಕಲ್ ಜಾಥಾ ಮೂಲಕ ಮತದಾನ ಜಾಗೃತಿ

| Published : Apr 02 2024, 01:02 AM IST

ಸಾರಾಂಶ

ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ, ತಾಲೂಕಾಡಳಿತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೈಕಲ್ ಮೂಲಕ ಮತದಾನ ಜಾಗೃತಿ ಅಭಿಯಾನ ಮೂಡಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾದಾಮಿ

ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೈಕಲ್ ಜಾಥಾಕ್ಕೆ ಸೋಮವಾರ ನಗರದ ಪಿಕಾರ್ಡ್‌ ಬ್ಯಾಂಕ್ ಆವರಣದಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ.ದುರ್ಗೇಶ ಎಸ್.ಜಿ. ಮತ್ತು ತಹಸೀಲ್ದಾರ ಜೆ.ಬಿ.ಮಜ್ಜಗಿ ಜಂಟಿಯಾಗಿ ಚಾಲನೆ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ, ತಾಲೂಕಾಡಳಿತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೈಕಲ್ ಮೂಲಕ ಮತದಾನ ಜಾಗೃತಿ ಅಭಿಯಾನ ಮೂಡಿಸಲಾಯಿತು. 18 ವರ್ಷ ಪೂರೈಸಿದ ಪ್ರತಿ ಮತದಾರರು ತಪ್ಪದೇ ಮತದಾನ ಮಾಡಬೇಕು. ಮತದಾನ ಪವಿತ್ರವಾದ ಹಕ್ಕು, ಹೀಗೆ ಹಲವು ಭಿತ್ತಿಚಿತ್ರ, ಪೊಸ್ಟರ್, ಸ್ಟಿಕರ್ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ವೇಳೆ ತಾ.ಪಂ ಇಒ ಬಿರೇಂದ್ರ ಸಿಂಗ್, ಬಿಇಒ ಎನ್.ವೈ.ಕುಂದರಗಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ಕೃಷಿ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ, ಪಿಎಸ್‌ಐ ವಿಠ್ಠಲ ನಾಯಕ, ಪುರಸಭೆ ಮುಖ್ಯಾಧಿಕಾರಿ ಡಿ.ಸುಧಾಕರ, ದೈನಿಕ ಶಿಕ್ಷಣ ಪರಿವೀಕ್ಷಕ ಬಿ.ಎಚ್.ಹಳಗೇರಿ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ ಸಬನೀಸ್, ಶಿಕ್ಷಣ ಸಂಯೋಜಕ ವಿ.ಎಸ್.ಹಿರೇಮಠ, ಎಂ.ಸಿ.ನಾಲತವಾಡ, ಮುಖ್ಯಶಿಕ್ಷಕ ಬಿ.ಎಸ್.ಕರಡಿ, ಸಮೂಹ ಸಂಪನ್ಮೂಲ ವ್ಯಕ್ತಿ ಶಿವಪ್ರಕಾಶ ಇಟಗಿ, ಸೇರಿದಂತೆ ಬಾದಾಮಿ ನಗರದ ಮತಗಟ್ಟೆ ಅಧಿಕಾರಿಗಳು ಹಾಜರಿದ್ದರು.