ಮತದಾನ ದೇಶದ ನಾಗರಿಕರ ಕರ್ತವ್ಯ: ಇಒ ಕಮ್ಮಾರ

| Published : Mar 28 2024, 12:48 AM IST

ಸಾರಾಂಶ

ಚಿಕ್ಕೋಡಿ: ಚುನಾವಣೆಯ ಪರ್ವ, ದೇಶದ ಗರ್ವ ಘೋಷವಾಕ್ಯದೊಂದಿಗೆ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಮೂಡಿಸಬೇಕಾಗಿದೆ. ಪ್ರತಿಯೊಬ್ಬರಿಗೆ ಮತದಾನ ಹಕ್ಕಿದೆ ಎಂದು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಜಗದೀಶ ಕಮ್ಮಾರ ತಿಳಿಸಿದರು. ತಾಲೂಕ ಪಂಚಾಯತ ಸಭಾಭವನದಲ್ಲಿ ಬ್ಯಾಂಕ್ ಬಿಎಲ್‌ಬಿಸಿ ಸಭೆ ಹಾಗೂ ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರಿಗೆ ಗಟ್ಟಿ ಓದು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹ ಪರಿಣಾಮ ಬಿರುವ ನಾಗರಿಕ ಕರ್ತವ್ಯವಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಚುನಾವಣೆಯ ಪರ್ವ, ದೇಶದ ಗರ್ವ ಘೋಷವಾಕ್ಯದೊಂದಿಗೆ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಮೂಡಿಸಬೇಕಾಗಿದೆ. ಪ್ರತಿಯೊಬ್ಬರಿಗೆ ಮತದಾನ ಹಕ್ಕಿದೆ ಎಂದು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಜಗದೀಶ ಕಮ್ಮಾರ ತಿಳಿಸಿದರು. ತಾಲೂಕ ಪಂಚಾಯತ ಸಭಾಭವನದಲ್ಲಿ ಬ್ಯಾಂಕ್ ಬಿಎಲ್‌ಬಿಸಿ ಸಭೆ ಹಾಗೂ ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರಿಗೆ ಗಟ್ಟಿ ಓದು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹ ಪರಿಣಾಮ ಬಿರುವ ನಾಗರಿಕ ಕರ್ತವ್ಯವಾಗಿದೆ ಎಂದರು.

ತಾಲೂಕಿನಲ್ಲಿ ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಹಾಗೂ ಯುವ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿ ಮತಗಟ್ಟೆಗಳ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಜನರಿಗೆ ತಿಳಿವಳಿಕೆ ನೀಡಲಾಗುತ್ತದೆ ಹಾಗೂ ತಾಲೂಕಿನ ಬ್ಯಾಂಕ್‌ಗಳಲ್ಲಿ ಮತ್ತು ಗ್ರಂಥಾಲಯಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ ಜಾಗೃತಿ ಮೂಡಿಸಬೇಕೆಂದು ಹೇಳಿದರು.

ಈ ವೇಳೆ ಬ್ಯಾಂಕ್‌ ಅಧಿಕಾರಿಗಳಿಗೆ ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋಧಿಸಿದರು. ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವ, ವ್ಯವಸ್ಥಾಪಕ ಉದಯಗೌಡ ಪಾಟೀಲ, ನಿರ್ವಾಹಕರು ಶ್ರೀದೇವಿ ನಡಿವಿನಕೇರಿ, ಐಇಸಿ ಸಂಯೋಜಕ ರಂಜಿತ ಕಾರ್ಣಿಕ, ಎನ್‌ಆರ್‌ಎಲ್‌ಎಂ ವಲಯ ಮೇಲ್ವಿಚಾರಕ ಬಸವರಾಜ ದೊಡ್ಡನಿಂಗಪ್ಪಗೋಳ, ಎನ್‌ಆರ್‌ಎಲ್‌ಎಂ ಬ್ಯಾಂಕ್‌ ಮ್ಯಾನೇಜರ್‌ ಬಸವರಾಜ ಕೋಟಬಾಗಿ ಉಪಸ್ಥಿತರಿದ್ದರು.