ಸಾರಾಂಶ
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಶುಕ್ರವಾರ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಸಿಬ್ಬಂದಿ ಮತಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದ್ದಾರೆ.
ಪಾರದರ್ಶಕತೆ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ, ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಸೇರಿದಂತೆ ಒಂಭತ್ತು ಮಂದಿ ಕಣದಲ್ಲಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ವ್ಯಾಪ್ತಿಯ ಶಿಕ್ಷಕರು ಮತದಾನ ಮಾಡಲಿದ್ದಾರೆ. ಇದೇ ತಿಂಗಳು 20ರಂದು ಮತ ಎಣಿಕೆ ನಡೆಯಲಿದೆ.