ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ

| Published : Jun 04 2024, 12:31 AM IST

ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ವಿಧಾನ ಪರಿಷತ್‌ ಚುನಾವಣೆಗೆ ಬಿರುಸಿನ ಮತದಾನ ನಡೆಯಿತು. ಮತದಾರರು ಉತ್ಸಾಹದಿಂದ ಮತದಾನ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನವು ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಬಿರುಸಿನಿಂದ ನಡೆಯಿತು.

ಬೆಳಗ್ಗೆ 10 ಗಂಟೆ ವೇಳೆಗೆ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮತದಾನವು ಶೇ.22.69 ರಷ್ಟು, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೇ.20.08 ರಷ್ಟು ಮತದಾನವಾಗಿತ್ತು.

ಮಧ್ಯಾಹ್ನ 12 ಗಂಟೆ ವೇಳೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನವು ಶೇ.47.28 ರಷ್ಟು, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೇ.42.85 ರಷ್ಟು ಮತದಾನವಾಗಿತ್ತು.

ಮಧ್ಯಾಹ್ನ 2 ಗಂಟೆ ವೇಳೆಗೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೇ.66.41 ರಷ್ಟು, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೇ.62.42 ರಷ್ಟು ಮತದಾನ ಆಗಿತ್ತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನಗರಸಭೆಯ ಕೌನ್ಸಿಲ್ ಸಭಾಂಗಣದ ಮತಗಟ್ಟೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆಯಲ್ಲಿ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರ ಸಂಬಂಧ ಬಿರುಸಿನ ಮತದಾನ ನಡೆದಿದೆ ಎಂದು ಹೇಳಿದರು.

ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರು ಉತ್ಸಾಹದಿಂದ ಮತದಾನ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ನಡೆದ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇಕಡ 86.68 ರಷ್ಟು ಮತದಾನವಾಗಿದೆ. ಒಟ್ಟು 1578 ಮತದಾರರಲ್ಲಿ 1370 ಶಿಕ್ಷಕರು ಮತ ಚಲಾಯಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ನಡೆದ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶೇಕಡ 81.09 ರಷ್ಟು ಮತದಾನವಾಗಿದೆ. ಒಟ್ಟು 3909 ಮತದಾರರಲ್ಲಿ 3170 ಪದವೀದರರು ಮತ ಚಲಾಯಿಸಿದ್ದಾರೆ.