ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮತದಾನ ಅವಶ್ಯ

| Published : Apr 13 2024, 01:02 AM IST

ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮತದಾನ ಅವಶ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮುಧೋಳ: ಭಾರತ ದೇಶದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಗೊಳಿಸಲು ಪ್ರತಿ ಮತದಾರರು ಮತದಾನ ಮಾಡುವುದು ಅವಶ್ಯವಾಗಿದೆ ಎಂದು ತಹಸೀಲ್ದಾರ ವಿನೋಧ ಹತ್ತಳ್ಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸ್ವೀಪ್ ಸಮಿತಿ ಮುಧೋಳ ಇವರ ಸಹಯೋಗದಲ್ಲಿ ಬುಧವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಯಾರಿಗೂ ಹೆದರದೆ ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ 18 ವರ್ಷ ಮೇಲ್ಪಟ್ಟವರು ಮತದಾನ ಮಾಡಬೇಕು ಎಂದರು.

ಕನ್ನಡ ಪ್ರಭ ವಾರ್ತೆ ಮುಧೋಳ

ಭಾರತ ದೇಶದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಗೊಳಿಸಲು ಪ್ರತಿ ಮತದಾರರು ಮತದಾನ ಮಾಡುವುದು ಅವಶ್ಯವಾಗಿದೆ ಎಂದು ತಹಸೀಲ್ದಾರ ವಿನೋಧ ಹತ್ತಳ್ಳಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸ್ವೀಪ್ ಸಮಿತಿ ಮುಧೋಳ ಇವರ ಸಹಯೋಗದಲ್ಲಿ ಬುಧವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಯಾರಿಗೂ ಹೆದರದೆ ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ 18 ವರ್ಷ ಮೇಲ್ಪಟ್ಟವರು ಮತದಾನ ಮಾಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ ಕೋರಡ್ಡಿ ಮಾತನಾಡಿ, ತಾಲೂಕಿನಲ್ಲಿ ಪ್ರತಿ ಗ್ರಾಮಗಳಲ್ಲಿ ಶೇ 100 ರಷ್ಟು ಮತದಾನ ಆಗಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅನೇಕರು ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಗೆ ವಲಸೆ ಹೋಗಿದ್ದು ಅವರಿಗೆ ಮೊಬೈಲ್ ಕರೆ ಮಾಡಿ ಮತದಾನದ ಮಾಹಿತಿ ನೀಡಬೇಕು. ಮತದಾನದಲ್ಲಿ ಭಾಗಿಯಾಗಲು ಪ್ರೇರಣೆ ನೀಡುವುದು ನಮ್ಮೆಲ್ಲರ ಹೊಣೆ ಎಂದರು.

ನಗರದ ಪರಿಶಿಷ್ಟ ಜಾತಿ ಕಾಲೋನಿಗಳಾದ ಸುಡುಗಾಡ ಸಿದ್ದರ ಹಾಗೂ ಲಮಾಣಿ ತಾಂಡಾಗಳಲ್ಲಿ ಮತದಾನದ ಕುರಿತು ಮನೆ ಮನೆಗಳಿಗೆ ಭೇಟಿ ನೀಡಿ ಆಮಂತ್ರಣ ಕಾರ್ಡ್‌ ನೀಡಿ ಮತದಾನದ ಅರಿವು ಮೂಡಿಸುವ ಜಾಗೃತಿ ಮೂಡಿಸಲಾಯಿತು.

ತಹಸೀಲ್ದಾರ ವಿನೋದ ಹತ್ತಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವಿ.ಪಿ.ಏಗನಗೌಡರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ ಕೋರಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಿಬ್ಬಂದಿ, ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.