ಪ್ರಜಾಪ್ರಭುತ್ವ ಅಡಿಪಾಯವೇ ಮತದಾನ: ಸುರೇಶ್‌ ಇಟ್ನಾಳ್

| Published : May 04 2024, 01:31 AM IST

ಸಾರಾಂಶ

ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದೆ. ತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ ಚಲಾಯಿಸೋಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.

- ಖಾಸಗಿ ಬಸ್‌ ನಿಲ್ದಾಣದಲ್ಲಿ ಮೊಂಬತ್ತಿ ಹಿಡಿದು ಮತದಾನ ಜಾಗೃತಿ ಕಾರ್ಯಕ್ರಮ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದೆ. ತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ ಚಲಾಯಿಸೋಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದರು.

ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಣದಬತ್ತಿ ಹಿಡಿದು ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೇ 7ರಂದು ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸುವುದಲ್ಲದೇ, ತಮ್ಮ ನೆರೆಹೊರೆಯವರಿಗೂ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು. ಈಗಾಗಲೇ ಮತದಾರರ ಜಾಗೃತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಅರ್ಹರಿಗೆ ಮತದಾನ ಮಾಡಬೇಕೆಂದರು.

ಚುನಾವಣಾ ಆಯೋಗವು ಎಲ್ಲ ಜಿಲ್ಲೆಗಳಲ್ಲಿ ಮತದಾರರ ಜಾಗೃತಿಗೆ ನಡೆದ ಕಾರ್ಯಕ್ರಮಗಳ ಅಪ್‌ಲೋಡ್‌ಗಾಗಿ ವೆಬ್‌ಸೈಟ್ ಮಾಡಿದ್ದು, ಅದರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರೂ 600ಕ್ಕೂ ಹೆಚ್ಚು ಸ್ವೀಪ್ ಕಾರ್ಯಕ್ರಮ ಮಾಡಿರುವ ದಾಖಲೆಗಳಿವೆ ಎಂದರು.

ನಗರದ ಖಾಸಗಿ ಬಸ್ ನಿಲ್ದಾಣದಿಂದ ಅರುಣ ಸರ್ಕಲ್‌ರವರೆಗೆ ಮೇಣದಬತ್ತಿ ಹಿಡಿದು ಜಿಲ್ಲಾಮಟ್ಟದ ಅಧಿಕಾರಿಗಳು, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.

ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್, ಜಿಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತೆ ರೇಣುಕಾ, ಸ್ವೀಪ್ ಸಮಿತಿ ರಾಯಭಾರಿ ಪೃಥ್ವಿ ಶಾಮನೂರು, ಜಿಪಂ ಯೋಜನಾಧಿಕಾರಿ ಮಲ್ಲನಾಯ್ಕ, ಲೀಡ್ ಬ್ಯಾಂಕ್ ಪ್ರಕಾಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.

- - - -3ಕೆಡಿವಿಜಿ42ಃ:

ದಾವಣಗೆರೆ ಜಿಲ್ಲಾಡಳಿತದಿಂದ ನಡೆದ ಮೇಣದಬತ್ತಿ ಹಿಡಿದು ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಸುರೇಶ ಬಿ. ಇಟ್ನಾಳ್ ಉದ್ಘಾಟಿಸಿದರು.