ಮತದಾನ ಪ್ರಜಾಪ್ರಭುತ್ವದ ಆಧಾರಸ್ತಂಭ: ಪೋತೆದಾರ್

| Published : Apr 26 2024, 12:48 AM IST

ಮತದಾನ ಪ್ರಜಾಪ್ರಭುತ್ವದ ಆಧಾರಸ್ತಂಭ: ಪೋತೆದಾರ್
Share this Article
  • FB
  • TW
  • Linkdin
  • Email

ಸಾರಾಂಶ

ಸಿಂಧನೂರಿನ ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಮತ್ತು ಮತದಾನ ಮಹತ್ವ ಕುರಿತು ಕವಿಗೋಷ್ಠಿ ಕಾರ್ಯಕ್ರಮವನ್ನು ಸಹಾಯಕ ಚುನಾವಣಾಧಿಕಾರಿ ಮಹೇಶ ಪೋತೆದಾರ್ ಉದ್ಘಾಟಿಸಿದರು

ಕನ್ನಡಪ್ರಭ ವಾರ್ತೆ ಸಿಂಧನೂರು

ಮತದಾನ ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕೊಪ್ಪಳ ಲೋಕಸಭೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮಹೇಶ ಪೋತೆದಾರ್ ಹೇಳಿದರು.

ನಗರದ ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್, ನಗರಸಭೆ ಹಾಗೂ ತಾಲೂಕು ಆಡಳಿತ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಮತ್ತು ಮತದಾನ ಮಹತ್ವ ಕುರಿತು ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಆಸೆ ಆಮಿಷಗಳಿಗೆ ಬಲಿಯಾಗಬಾರದು. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಮತದಾನ ಅತ್ಯವಶ್ಯಕ ಎಂದರು.

ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಶೇ.80 ರಷ್ಟು ಮತದಾನದ ಗುರಿ ಹೊಂದಲಾಗಿದ್ದು, ತಾಲೂಕಿನ 2.45 ಲಕ್ಷ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಮಾತನಾಡಿದರು. ನಂತರ 20ಕ್ಕೂ ಅಧಿಕ ಕವಿಗಳು ಮತದಾನ ಕುರಿತು ಸ್ವರಚಿತ ಕವನ ವಾಚಿಸಿ ಗಮನ ಸೆಳೆದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಬೀರಪ್ಪ ಶಂಭೋಜಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೆ, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಇದ್ದರು. ಶಂಕರದೇವರು ಹಿರೇಮಠ ನಿರೂಪಿಸಿದರು.