ವಿಟಿಯು ಫೆಸ್ಟ್: ಆಳ್ವಾಸ್ ಎಂಜಿನಿಯರಿಂಗ್‌ ಕಾಲೇಜು ತೃತೀಯ

| Published : Apr 01 2025, 12:49 AM IST

ವಿಟಿಯು ಫೆಸ್ಟ್: ಆಳ್ವಾಸ್ ಎಂಜಿನಿಯರಿಂಗ್‌ ಕಾಲೇಜು ತೃತೀಯ
Share this Article
  • FB
  • TW
  • Linkdin
  • Email

ಸಾರಾಂಶ

ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿ ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ ೧೪೦ಕ್ಕೂ ಅಧಿಕ ಕಾಲೇಜುಗಳು ಭಾಗವಹಿಸಿದ್ದವು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಆತಿಥ್ಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ ೨೪ನೇ ಅಂತರ್‌ ಕಾಲೇಜು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದರು.

ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿ ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ ೧೪೦ಕ್ಕೂ ಅಧಿಕ ಕಾಲೇಜುಗಳು ಭಾಗವಹಿಸಿದ್ದವು.

ಶಶಿರಾಜ್ ರಾವ್ ಕಾವೂರು ರಚಿಸಿದ ಏಕಾದಶಾನನವನ್ನು ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದರು. ಮಗು ಮತ್ತು ಮರ ಕಿರು ಪ್ರಹಸನವನ್ನು ರಾಜೇಂದ್ರ ಪ್ರಸಾದ್ ಮಂಡ್ಯ ಹಾಗೂ ಪ್ರಶಾಂತ್ ಕೋಟ ನಿರ್ದೇಶಿಸಿದ್ದರು. ಸಾತ್ವಿಕ್ ನೆಲ್ಲಿತೀರ್ಥ ಮತ್ತು ಮಧುಸೂದನ (ನೀನಾಸಂ) ಕೊಡಗು ರಂಗವಿನ್ಯಾಸ ಮಾಡಿದ್ದರು. ಎರಡೂ ನಾಟಕಗಳಿಗೆ ಆಳ್ವಾಸ್ ಪಿ.ಯು. ವಿದ್ಯಾರ್ಥಿ, ಸುಳ್ಯ ರಂಗಮನೆಯ ಮನುಜ ನೇಹಿಗ ಸಂಗೀತ ನೀಡಿದ್ದರು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.