ವಕ್ಫ್ ಆಸ್ತಿ ವಿವಾದ: ಮುಂಡರಗಿಯಲ್ಲಿ ತಹಸೀಲ್ದಾರರಿಗೆ ಮನವಿ

| Published : Nov 05 2024, 12:48 AM IST

ಸಾರಾಂಶ

ಬಿಜೆಪಿ ಮುಂಡರಗಿ ಮಂಡಲದ ವತಿಯಿಂದ ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮುಂಡರಗಿ: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಮುಂಡರಗಿ ಮಂಡಲದ ವತಿಯಿಂದ ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ. ಸವಣೂರು ತಾಲೂಕು ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್ ಮುಂದಾಗಿದೆ. ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಫ್‌ ಆಸ್ತಿ ಎಂದು ವಕ್ಫ್ ಹಕ್ಕು ಮಂಡಿಸಿದೆ. ಇವು ಕೆಲವು ಉದಾಹರಣೆಗಳಷ್ಟೇ. ವಕ್ಫ್ ಬೋರ್ಡಿನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿ ಈ ತಂತ್ರಗಾರಿಕೆ ಒಪ್ಪುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಸಲ್ಲಿಸಿದ ಮನವಿಯಲ್ಲಿ ವಿವರಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ್, ಕೊಟ್ರೇಶ ಅಂಗಡಿ, ಎಸ್.ಎಸ್. ಗಡ್ಡದ, ಪ್ರಶಾಂತಗೌಡ ಗುಡದಪ್ಪನವರ, ಜ್ಯೋತಿ ಹಾನಗಲ್, ಶ್ರೀನಿವಾಸ ಅಬ್ಬಿಗೇರಿ, ಮಾರುತಿ ಹೊಸಮನಿ, ಪರಶುರಾಮ ಕರಡಿಕೊಳ್ಳ, ನಾಗರಾಜ ಹಾನಗಲ್, ಶಂಕರ್ ಉಳ್ಳಾಗಡ್ಡಿ, ದೇವು ಹಡಪದ, ರಮೇಶ ಹುಳಕಣ್ಣವರ, ಕುಮಾರಸ್ವಾಮಿ ಹಿರೇಮಠ, ಪುಷ್ಪಾ ಉಕ್ಕಲಿ, ಅರುಣಾ ಪಾಟೀಲ, ಮೀನಾ ಬೂದಿಹಾಳ, ಪ್ರಭಾವತಿ ಬೆಳವಣಕಿಮಠ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.