ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಿರಿ-ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ

| Published : Feb 02 2024, 01:01 AM IST

ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಿರಿ-ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ.

ಹನುಮಸಾಗರ: ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ ಹೇಳಿದರು.

ಗ್ರಾಮದ ಗ್ರಾಪಂನಲ್ಲಿ ಗುರುವಾರ ವೀರಘಂಟಿ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. ಮಾಚಿದೇವರು 354 ವಚನಗಳನ್ನು ಬರೆದಿದ್ದಾರೆ ಎಂದು ತಿಳಿಸಿದರು ಮಡಿವಾಳರ ಸಮುದಾಯದ ರಾಜ್ಯ ಕಾರ್ಯದರ್ಶಿ ದುರಗೇಶ ಮಡಿವಾಳರ ಮಾತನಾಡಿ, ಮಡಿವಾಳ ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ. ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದು. ವಿಶಾಲ ಮನೋಧರ್ಮ ಮಡಿವಾಳ ಸಮುದಾಯದ ಜನರಲ್ಲಿದೆ. ಶಿವಶರಣ ಮಾಚಿದೇವರ ಮಾರ್ಗದರ್ಶನದಿಂದ ಮುನ್ನಡೆಯುತ್ತಿರುವುದೇ ಇದಕ್ಕೆ ಕಾರಣ. ಮಾಚಿದೇವ ಸಮಾಜದ ಕೊಳಕು ತೊಳೆದು ಹಾಕಿದವರು. ಕಾಯಕದ ಆಧಾರದಲ್ಲಿ ವಿಭಜನೆ ಆಗುತ್ತಿರುವ ಸಮಾಜಕ್ಕೆ ಮಾಚಿದೇವರ ಸಂದೇಶ ಆದರ್ಶವಾಗಬೇಕಾದ ಅಗತ್ಯವಿದೆ. ‘ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾದರು ಎಂದರು.ಗ್ರಾಪಂ ಉಪಾಧ್ಯಕ್ಷೆ ಹನುಮವ್ವ ಕಂದಗಲ್ಲ, ಪಿಡಿಓ ದೇವೇಂದ್ರ ಕಂದಗಲ್ಲ ಗ್ರಾಪಂ ಸದಸ್ಯರು ಇತರರು ಇದ್ದರು.

ಮದ್ನಾಳ: ಸಮೀಪದ ಮದ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರಘಂಟಿ ಮಡಿವಾಳ ಮಾಚಿದೇವರ ಜಯಂತಿಯನ್ನು ಗುರುವಾರ ಆಚರಿಸಲಾಯಿತು.ಮುಖ್ಯಶಿಕ್ಷಕ ಶರಣಪ್ಪ ತುಮರಿಕೊಪ್ಪ ಪೂಜೆ ನೆರವೇರಿಸಿ ಮಾತನಾಡಿದರು. ಶಿಕ್ಷಕರಾದ ಅಶೋಕ ಕಟ್ಟಿಮನಿ, ಲೀಲಾ ಹೂಗಾರ, ಮಮ್ತಾಜ್‌ ಬೇಗಂ ಬಾಗವಾನ, ಮಲ್ಲನಗೌಡ ಪೊಲೀಸ್‌ಪಾಟೀಲ್, ಯಮೂನೂರಪ್ಪ ಪೊಲೀಸ್‌ಪಾಟೀಲ್, ಕವಿತಾಗೌಡ್ರ, ಮಂಜುಳಾ ಹಾದಿಮನಿ, ಸರೋಜಾ ಕಬ್ಬರಗಿ, ದ್ಯಾಮವ್ವ ಗೌಡ್ರ ಇದ್ದರು.