ರಾಮಾಯಣದ ಸಂದೇಶ ಅರಿತು ನಡೆಯಿರಿ: ಡಾ.ಹೊಸಮನಿ

| Published : Oct 20 2024, 01:48 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಶ್ರೀರಾಮ ಶ್ರೇಷ್ಠವೆಂದು ರಾಮಾಯಣದ ಮೂಲಕ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಶ್ರೀರಾಮನಿಗಿಂತಲೂ ಶ್ರೇಷ್ಠ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ವಾಲ್ಮೀಕಿ ರಾಮಾಯಣದ ಮೂಲಕ ಸಂಕ್ಷಿಪ್ತವಾಗಿ ಯಾವುದೇ ಕೊರತೆ ಇಲ್ಲದಂತೆ ಎಲ್ಲವನ್ನು ಕಟ್ಟಿಕೊಟ್ಟಿದ್ದಾರೆ. ರಾಮಾಯಣದ ಸಂದೇಶವನ್ನು ಅರಿತು ಜೀವನ ಸಾಗಿಸಬೇಕೆಂದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಶ್ರೀರಾಮ ಶ್ರೇಷ್ಠವೆಂದು ರಾಮಾಯಣದ ಮೂಲಕ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಶ್ರೀರಾಮನಿಗಿಂತಲೂ ಶ್ರೇಷ್ಠ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ವಾಲ್ಮೀಕಿ ರಾಮಾಯಣದ ಮೂಲಕ ಸಂಕ್ಷಿಪ್ತವಾಗಿ ಯಾವುದೇ ಕೊರತೆ ಇಲ್ಲದಂತೆ ಎಲ್ಲವನ್ನು ಕಟ್ಟಿಕೊಟ್ಟಿದ್ದಾರೆ. ರಾಮಾಯಣದ ಸಂದೇಶವನ್ನು ಅರಿತು ಜೀವನ ಸಾಗಿಸಬೇಕೆಂದರು.ಸಹಾಯಕ ಪ್ರಾಧ್ಯಾಪಕ ಶ್ರೀಶೈಲ ಬಳವಾಟ ಮಾತನಾಡಿ, ಜಗತ್ತಿನ ಶ್ರೇಷ್ಠ ದಾರ್ಶನಿಕ ಮಹರ್ಷಿ ವಾಲ್ಮೀಕಿಯ ಬದುಕೇ ಒಂದು ಸುಂದರ ಕಾವ್ಯ. ಅವರು ರಚಿಸಿರುವ ರಾಮಾಯಣ ಮಹಾಕಾವ್ಯವಾಗಿ ಸಾರ್ವಕಾಲಿಕ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿದೆ. ಭಾರತೀಯರೆಲ್ಲರೂ ರಾಮಾಯಣ ಕಾವ್ಯ ಓದಿ ಅದರಲ್ಲಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ.ಅಮಿತ ಮಿರ್ಜಿ, ಬೋಧಕ,ಬೋಧಕೇತರ ಸಿಬ್ಬಂದಿ ಇದ್ದರು. ಅವ್ವಣ್ಣ ಗೂಳಪ್ಪರ ಪ್ರಾರ್ಥಿಸಿದರು. ಡಾ.ಭಾನು ಸ್ವಾಗತಿಸಿದರು. ಭೀಮಶಿ ಹಡಪದ ನಿರೂಪಿಸದರು. ಶೀಲಾ ರಾಮತೀರ್ಥ ವಂದಿಸಿದರು