ಸಾರಾಂಶ
ಸಿಗರೇಟು, ಮಾವಾ, ತಂಬಾಕು, ಗುಟ್ಕಾಗಳಿಂದ ಆರಂಭವಾಗುವ ದುಶ್ಚಟ ಕ್ರಮೇಣ ಗಾಂಜಾ, ಕಾಫ್ ಸಿರಪ್, ವೈಟ್ನರ್ ಸೇರಿದಂತೆ ಹಲವು ಮಾದಕ ವಸ್ತುಗಳ ದಾಸರಾಗಿ ಬದಲಾಗುತ್ತಾರೆ.
ಕನ್ನಡಪ್ರಭ ವಾರ್ತೆ ಚಡಚಣ
ಮಾದಕ ವಸ್ತುಗಳ ಸಾಗಣೆ ಮತ್ತು ಮಾರಾಟ ಕಾನೂನು ಪ್ರಕಾರ ಅಪರಾಧವಾಗಿದ್ದು,ಈ ಚಟುವಟಿಕೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಸಿಪಿಐ ಸುರೇಶ ಬೆಂಡಗುಂಬಳ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಾಕ್ ಮತ್ತು ರನ್ ಮಾಡುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಿಗರೇಟು, ಮಾವಾ, ತಂಬಾಕು, ಗುಟ್ಕಾಗಳಿಂದ ಆರಂಭವಾಗುವ ದುಶ್ಚಟ ಕ್ರಮೇಣ ಗಾಂಜಾ, ಕಾಫ್ ಸಿರಪ್, ವೈಟ್ನರ್ ಸೇರಿದಂತೆ ಹಲವು ಮಾದಕ ವಸ್ತುಗಳ ದಾಸರಾಗಿ ಬದಲಾಗುತ್ತಾರೆ. ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಆತನ ಕುಟುಂಬದ ಮೇಲೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಯುವಕರು ಮಾದಕ ವಸ್ತುಗಳಿಂದ ದೂರ ಉಳಿಯಬೇಕೆಂದು ಸಲಹೆ ನೀಡಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬಜಾರ್ ಮೂಲಕ ಸ್ಟೇಟ್ ಬ್ಯಾಂಕ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಪಿಎಸ್ಐ ಸಂಜಯಕುಮಾರ ಕಲ್ಲೂರ, ಹೋಂಗಾರ್ಡಸ್ ಯೂನಿಟ್, ಅಟೋಚಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.