ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಪಂಚವೇ ಒಪ್ಪಿ ವಿಶ್ವನಾಯಕ ಎಂದು ಕರೆದಿದೆ. ಆದರೆ, ಸಿಎಂ ಸಿದ್ದರಾಮಯ್ಯ ದೇಶದ ಪ್ರಧಾನಿ ಅವರಿಗೆ ಲಘುವಾಗಿ ಮಾತನಾಡುವ ಮೂಲಕ ತಮ್ಮ ವ್ಯಕ್ತಿತ್ವ ತೋರ್ಪಡಿಸಿಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರವನ್ನು ಸಾರ್ವಜನಿಕರಿಗೆ ತಿಳಿಸಲು ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ಪಾದಯಾತ್ರೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ ಹೇಳಿದರು.ತಾಲೂಕು ಪೀಹಳ್ಳಿಯಲ್ಲಿ ಪಾದಯಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಪಂಚವೇ ಒಪ್ಪಿ ವಿಶ್ವನಾಯಕ ಎಂದು ಕರೆದಿದೆ. ಆದರೆ, ಸಿಎಂ ಸಿದ್ದರಾಮಯ್ಯ ದೇಶದ ಪ್ರಧಾನಿ ಅವರಿಗೆ ಲಘುವಾಗಿ ಮಾತನಾಡುವ ಮೂಲಕ ತಮ್ಮ ವ್ಯಕ್ತಿತ್ವ ತೋರ್ಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಪಾದಯಾತ್ರೆ ಜಿಲ್ಲೆ ಹಾಗೂ ತಾಲೂಕಿಗೆ ಆಗಮಿಸುತ್ತಿದ್ದಂತೆ ಹೋಬಳಿ ಮಟ್ಟದ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.ತಾಲೂಕು ಬಿಜೆಪಿ ಅಧ್ಯಕ್ಷ ಪೀಹಳ್ಳಿ ರಮೇಶ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳ ಮೂಡಾ ವಿಚಾರವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜೇಂದ್ರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಜಂಟಿಯಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ,ತಾಲೂಕಿನ ಅರಕೆರೆ, ಕೆ.ಶೆಟ್ಟಹಳ್ಳಿ, ಕಸಬಾ ಹಾಗೂ ಬೆಳಗೊಳ ಹೋಬಳಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.