ಸಾರಾಂಶ
ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆ. ಮಸೂದೆಯು ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ ಕಸಿದುಕೊಳ್ಳುವ ಗುರಿ ಹೊಂದಿರುವ ಅಸ್ತ್ರವಾಗಿದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ದಾವಣಗೆರೆ
ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆ. ಮಸೂದೆಯು ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ ಕಸಿದುಕೊಳ್ಳುವ ಗುರಿ ಹೊಂದಿರುವ ಅಸ್ತ್ರವಾಗಿದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ದೇಶದ ಅಲ್ಪಸಂಖ್ಯಾತ ಸಮುದಾಯದವರ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶದಿಂದಲೇ ವಕ್ಫ್ ತಿದ್ದುಪಡಿ ಕಾನೂನು ಜಾರಿಗೊಳಿಸಲಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ರೂಪಿಸಬೇಕಾಗಿದೆ. ಒಂದು ಧರ್ಮದವರನ್ನು ಗುರಿಯಾಗಿಸಿ ನಡೆಸಿರುವ ವ್ಯವಸ್ಥಿತ ದಾಳಿ ಇದು ಎಂದು ಪ್ರತಿಕ್ರಿಯಿಸಿದ್ದಾರೆ.
ಆರ್‌ಎಸ್‌ಎಸ್, ಬಿಜೆಪಿ ಮತ್ತು ಮಿತ್ರಪಕ್ಷಗಳಿಂದ ಸಂವಿಧಾನದ ಮೇಲಿನ ಈ ದಾಳಿ ಇಂದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲು ಒಂದು ಪೂರ್ವ ನಿದರ್ಶನವಾಗಿದೆ. ಕಾಂಗ್ರೆಸ್ ವಕ್ಫ್ ತಿದ್ದುಪಡಿ ಮಸೂದೆ ಬಲವಾಗಿ ವಿರೋಧಿಸುತ್ತದೆ. ಏಕೆಂದರೆ, ಇದು ಭಾರತದ ಕಲ್ಪನೆ ಮೇಲೆಯೇ ನಡೆದ ದಾಳಿಯಾಗಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.- - -
-3ಕೆಡಿವಿಜಿ45: ಸೈಯದ್ ಖಾಲಿದ್ ಅಹ್ಮದ್