ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಯಶ್ಪಾಲ್ ಸುವರ್ಣ ಹರ್ಷ

| Published : Apr 04 2025, 12:46 AM IST

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಯಶ್ಪಾಲ್ ಸುವರ್ಣ ಹರ್ಷ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ ದೇಶದ ರಾಷ್ಟ್ರಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ ದೇಶದ ರಾಷ್ಟ್ರಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.1995ರ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಹಾಗೂ 1923ರ ಮುಸಲ್ಮಾನ್ ವಕ್ಫ್ ಕಾಯ್ದೆಯ ರದ್ದತಿ ಮಸೂದೆಯನ್ನು ಅಂಗೀಕರಿಸಿದ ಕೇಂದ್ರ ಸರ್ಕಾರದ ನಿರ್ಧಾರ ಅಭಿನಂದನಾರ್ಹವಾಗಿದ್ದು, ಈ ಮಸೂದೆಯ ಮೂಲಕ ವಕ್ಫ್ ಆಸ್ತಿಗಳ ನಿರ್ಹವಣೆಗೆ ಪಾರದರ್ಶಕವಾಗಿಸಲು ಹಾಗೂ ಹೆಚ್ಚು ಪರಿಣಾಮಕಾರಿಯಾಗಿ ವಕ್ಫ್ ಮಂಡಳಿಗಳ ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಿ, ಆಸ್ತಿಪಾಸ್ತಿಗಳ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ.ಈ ಮಸೂದೆ ಕಾಯ್ದೆಯಾಗಿ ಜಾರಿಯಾದಾಗ ಇದಕ್ಕೆ ಉಮ್ಮೀದ್ ಬಿಲ್ ಎಂದು ಹೆಸರಿಡಲು ಕೇಂದ್ರ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತಸ ತಂದಿದ್ದು, ಭಾರತ ಸ್ವಾತಂತ್ರ್ಯಗೊಂಡು 77 ವರ್ಷಗಳ ಬಳಿಕ ದಿಟ್ಟ ಹೆಜ್ಜೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮಸೂದೆ ಪರ ಮತ ಚಲಾಯಿಸಿದ ಎಲ್ಲ ಸಂಸದರಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.