ವಕ್ಫ್‌ ಆಸ್ತಿ ವಿವಾದ ಸಂಬಂಧ ರೈತರಿಗೆ ನೀಡಿದ ವಕ್ಫ್‌ ನೋಟಿಸ್‌ ವಾಪಸ್‌ : ಸಿಎಂ ಸಿದ್ದರಾಮಯ್ಯ

| Published : Oct 30 2024, 12:34 AM IST / Updated: Oct 30 2024, 06:57 AM IST

ವಕ್ಫ್‌ ಆಸ್ತಿ ವಿವಾದ ಸಂಬಂಧ ರೈತರಿಗೆ ನೀಡಿದ ವಕ್ಫ್‌ ನೋಟಿಸ್‌ ವಾಪಸ್‌ : ಸಿಎಂ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ವಕ್ಫ್‌ ಆಸ್ತಿ ವಿವಾದ ಸಂಬಂಧ ವಿಜಯಪುರದ ಯಾವುದೇ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸುವುದಿಲ್ಲ, ಈ ಕುರಿತು ನೋಟಿಸ್‌ ನೀಡಿದ್ದರೆ ಅದನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 ಬೆಂಗಳೂರು : ವಕ್ಫ್‌ ಆಸ್ತಿ ವಿವಾದ ಸಂಬಂಧ ವಿಜಯಪುರದ ಯಾವುದೇ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸುವುದಿಲ್ಲ, ಈ ಕುರಿತು ನೋಟಿಸ್‌ ನೀಡಿದ್ದರೆ ಅದನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯಪುರದ ವಕ್ಫ್‌ ಆಸ್ತಿ ಕುರಿತು ಹೊರಡಿಸಿದ ನೋಟಿಸ್‌ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ಹಾಗೂ ವಕ್ಫ್‌ ಸಚಿವ ಜಮೀರ್‌ ಅಹಮದ್‌ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ಯಾದಗಿರಿ ಹಾಗೂ ಧಾರವಾಡ ಜಿಲ್ಲೆಯಲ್ಲಿಯೂ ರೈತರಿಗೆ ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವ ಬಗ್ಗೆ ಕಂದಾಯ ಸಚಿವರ ಜೊತೆ ಚರ್ಚಿಸಲಾಗುವುದು. ನೋಟಿಸ್‌ ನೀಡಿದ್ದರೆ ವಾಪಸ್‌ ಪಡೆಯಲಾಗುವುದು ಎಂದರು.

ಒಳಮೀಸಲಾತಿ:

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ. ಆದರೆ ಒಳಮೀಸಲಾತಿ ನೀಡಲು ಖಚಿತ ದತ್ತಾಂಶ ಇಲ್ಲ ಎಂದು ಕೆಲವರ ಅಭಿಪ್ರಾಯ ಇರುವುದರಿಂದ ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಲು ನಿರ್ಧರಿಸಲಾಗಿದೆ. ಮೂರು ತಿಂಗಳೊಳಗೆ ವರದಿ ನೀಡಲು ಅವಧಿ ನೀಡಲಾಗುವುದು. ಅಲ್ಲಿವರೆಗೆ ಈಗಾಗಲೇ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವುದನ್ನು ಹೊರತುಪಡಿಸಿ ಹೊಸದಾಗಿ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.