ಉತ್ಪನ್ನ ಅಭಿವೃದ್ಧಿಗಾಗಿ ವಿನ್ಯಾಸ ಚಿಂತನೆ ಕುರಿತು ಕಾರ್ಯಕ್ರಮ

| Published : Apr 23 2024, 12:49 AM IST / Updated: Apr 23 2024, 12:50 AM IST

ಸಾರಾಂಶ

ಎಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಜಯಗಳಿಸಿದರೆ ಆನಂತರ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ತರುವ ಸಾಮರ್ಥ್ಯ ಪಡೆಯಲಿದ್ದಾರೆ ಹಾಗಾಗಿ ಇದನ್ನು ಅರಿತು ಎಲ್ಲರೂ ಅವರಿಗೆ ಮತ ನೀಡಬೇಕೆಂದು ಇನ್ಫೋಸಿಸ್ ಉಪಾಧ್ಯಕ್ಷ ಕೆ.ಎಸ್. ಸುಂದರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ಖಜಾಂಚಿ ಶ್ರೀಶೈಲರಾಮಣ್ಣನವರ್, ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಸದಾಶಿವೇಗೌಡ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಕೆ. ಗೋಪಾಲ ರೆಡ್ಡಿ

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗವು ಐಇಇಇ ಪವರ್ ಎಲೆಕ್ಟ್ರಾನಿಕ್ಸ್ ಸೊಸೈಟಿ ಸಹಯೋಗದೊಂದಿಗೆ ಉತ್ಪನ್ನ ಅಭಿವೃದ್ಧಿಗಾಗಿ ವಿನ್ಯಾಸ ಚಿಂತನೆ ಕುರಿತು 6 ದಿನಗಳ ಫ್ಯಾಕಲ್ಟಿ ಅಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಿತ್ತು.

ದೇಶಾದ್ಯಂತದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಅಧ್ಯಾಪಕರು ಈ ಕಾರ್ಯಕ್ರಮದಲ್ಲಿ ಭಾಗವಹಿದ್ದರು.

ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಇನ್ಫೋಸಿಸ್ ಉಪಾಧ್ಯಕ್ಷ ಕೆ.ಎಸ್. ಸುಂದರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ಖಜಾಂಚಿ ಶ್ರೀಶೈಲರಾಮಣ್ಣನವರ್, ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಸದಾಶಿವೇಗೌಡ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಕೆ. ಗೋಪಾಲ ರೆಡ್ಡಿ ಪಾಲ್ಗೊಂಡಿದ್ದರು.