ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ

| Published : Sep 12 2025, 02:00 AM IST

ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಡ್ರಗ್ಸ್ ಸಾಗಿಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹ ವಾರ್ಡನ್‌ವೊಬ್ಬನನ್ನು ಕಾರಾಗೃಹದ ಭದ್ರತಾ ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಾರ್ಡನ್ ಕಲ್ಲಪ್ಪ ಬಂಧನವಾಗಿದ್ದು, ಆತನಿಂದ ಒಂದು ಲಕ್ಷ ರು. ಮೌಲ್ಯದ 100 ಗ್ರಾಂ ಹಾಶಿಸ್ ಆಯಿಲ್ ಜಪ್ತಿ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಇತ್ತೀಚೆಗೆ ರಾತ್ರಿ ಪಾಳಿಯ ಕೆಲಸಕ್ಕೆ ಬಂದ ಕಲ್ಲಪ್ಪನನ್ನು ಕಾರಾಗೃಹದ ಪ್ರವೇಶ ದ್ವಾರದ ಭದ್ರತೆಯಲ್ಲಿದ್ದ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಸಿಎಫ್‌) ಸಿಬ್ಬಂದಿ ತಪಾಸಣೆ ನಡೆಸಿದಾಗ ಡ್ರಗ್ಸ್ ಸಾಗಾಣೆ ಕೃತ್ಯ ಬೆಳಕಿಗೆ ಬಂದಿದೆ. ಬಳಿಕ ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಆತನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ಯಾಂಟ್‌ ಜೇಬಲ್ಲಿ: 2018ರಲ್ಲಿ ಮಾಜಿ ಸೈನಿಕರ ಕೋಟಾದಡಿ ಕಾರಾಗೃಹ ಇಲಾಖೆಗೆ ಸೇರಿದ್ದ ಕಲ್ಲಪ್ಪ, ಪ್ರಸುತ್ತ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್‌ ಆಗಿದ್ದರು. ಹಣದಾಸೆಗೆ ಬಿದ್ದು ಅದೇ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆಗುವಂತಾಗಿದೆ. ಸೆ.7 ರಂದು ರಾತ್ರಿ ಕೆಲಸಕ್ಕೆ ಬಂದ ಕಲ್ಲಪ್ಪ ಅವರನ್ನು ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆಗೊಳಪಡಿಸಿದ್ದಾರೆ. ಆಗ ಅವರ ಪ್ಯಾಂಟ್‌ ಜೇಬಿನಲ್ಲಿ 100 ಗ್ರಾಂ ಹಾಶಿಸ್ ಆಯಿಲ್‌ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.