ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ತೆರವು ಕಾರ್ಯ

| Published : May 19 2024, 01:45 AM IST

ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ತೆರವು ಕಾರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ, ತ್ಯಾಜ್ಯವನ್ನು ಸುಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ವಿಶೇಷ ಸ್ವಚ್ಛ ಸಪ್ತಾಹ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್‌ ಕೆ. ಅವರ ಸೂಚನೆಯಂತೆ ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯಿತಿಗಳ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ರಾಶಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿದ್ದ ತ್ಯಾಜ್ಯಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು. ಒಣ ತ್ಯಾಜ್ಯಗಳನ್ನು ಸ್ವಚ್ಛ ಸಂಕೀರ್ಣಕ್ಕೆ ಸಾಗಿಸಲಾಯಿತು. ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ, ತ್ಯಾಜ್ಯವನ್ನು ಸುಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ವಿಶೇಷ ಸ್ವಚ್ಛ ಸಪ್ತಾಹ ನಡೆಸಲಾಯಿತು.ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯದಂತೆ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರೂ ಗ್ರಾಮದ ಸ್ವಚ್ಛತಾ ಕಾರ್ಯದಲ್ಲಿ ಗ್ರಾಮ ಪಂಚಾಯಿತಿಗೆ ಸಹಕಾರ ನೀಡಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಕಾಂಬಳೆ ಹೇಳಿದರು.