ಸಾರಾಂಶ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ, ಸುಳ್ಳು ಸುದ್ದಿ(ಫೇಕ್ ನ್ಯೂಸ್) ಹರಡುವಿಕೆ ಹಾಗೂ ಚುನಾವಣೆ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ, ಸುಳ್ಳು ಸುದ್ದಿ(ಫೇಕ್ ನ್ಯೂಸ್) ಹರಡುವಿಕೆ ಹಾಗೂ ಚುನಾವಣೆ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮೀಡಿಯಾ ಮಾನಿಟರಿಂಗ್ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಪೂರಕವಾಗಿ ಚುನಾವಣೆ ಆಯೋಗದ ಮಾರ್ಗಸೂಚಿ ಪ್ರಕಾರ ಮಾಧ್ಯಮ ಕಣ್ಗಾವಲು ಘಟಕ(ಮೀಡಿಯಾ ಮಾನಿಟರಿಂಗ್ ಕೇಂದ್ರ) ಸ್ಥಾಪಿಸಲಾಗಿದೆ. ಮುದ್ರಣ ಹಾಗೂ ಎಲೆಕ್ಟ್ರಾನಿಕ್ಸ್ ಮಾಧ್ಯಮಗಳಲ್ಲಿ ಪ್ರಸಾರವಾಗುವ ಚುನಾವಣೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರತಿದಿನ ಪರಿಶೀಲನೆ ಮಾಡುವುದರ ಜತೆಗೆ ನೀತಿಸಂಹಿತೆ ಹಾಗೂ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ಮಾದರಿ ನೀತಿಸಂಹಿತೆ ನೋಡಲ್ ಅಧಿಕಾರಿಗಳಿಗೆ ತಕ್ಚಣವೇ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.ಮೀಡಿಯಾ ಮಾನಿಟರಿಂಗ್ ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಎಂಸಿಎಂಸಿ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಮಾಹಿತಿ ನೀಡಿದರು. ಮೀಡಿಯಾ ಮಾನಿಟರಿಂಗ್ ಕೇಂದ್ರದ ಅಧಿಕಾರಿಗಳಾದ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಶ್ರೀದೇವಿ ನಾಗನೂರ, ಮುಖ್ಯ ಶಿಕ್ಷಕ ಲಕ್ಷ್ಮಣ ತಳವಾರ, ತಾಂತ್ರಿಕ ಸಹಾಯಕರಾದ ಮಹಾಂತೇಶ ಪತ್ತಾರ, ಸಹ ಶಿಕ್ಷಕರಾದ ಹೊಳೆಪ್ಪ ನಾಯಕ, ಸುನೀಲ ಪಾಟೀಲ ಸೇರಿದಂತೆ ವಾರ್ತಾ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.