ಸಾರಾಂಶ
ಯುಗಾದಿ ಹಾಗೂ ರಂಜಾನ್ ಹಬ್ಬದ ವೇಳೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್ ಪ್ರಸಾತ್ ಮನೋಹರ್ ಸೂಚಿಸಿದರು
ಬೆಂಗಳೂರು:ಯುಗಾದಿ ಹಾಗೂ ರಂಜಾನ್ ಹಬ್ಬದ ವೇಳೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್ ಪ್ರಸಾತ್ ಮನೋಹರ್ ಸೂಚಿಸಿದರು.
ಜಲಮಂಡಳಿಯ ಅಧಿಕಾರಿಗಳಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹಬ್ಬದ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.ನೀರು ಸೋರಿಕೆ ಬಗ್ಗೆ ಪ್ರತ್ಯೇಕ ಸಭೆ ನಡೆಸಿದ ಅವರು ನೀರಿನ ಸೋರಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಡಿಮೆ ಸಮಯದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ನೀರು ತಡೆಗಟ್ಟಬಹುದಾದ ಕಾಮಗಾರಿಗಳನ್ನು ಕೈಗೊಂಡು ಅದರ ಬಗ್ಗೆ ಬುಧವಾರ ವರದಿ ನೀಡುವಂತೆ ಸೂಚನೆ ನೀಡಿದರು.