ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳಿಗೆ ಅಗತ್ಯವಿರುವ ಬೃಹತ್ ಡೇಟಾ ಸೆಂಟರ್ಗಳ ನಿರ್ವಹಣೆಗೆ ಅಪಾರ ಪ್ರಮಾಣದ ವಿದ್ಯುತ್ ಮತ್ತು ನೀರು ಬಳಕೆಯಾಗುತ್ತಿರುವುದು ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಊಟಿಯ ಜಿಯೋದಾರ್ ಸಂಸ್ಥೆಯ ಸಿಇಒ ಹಾಗೂ ಮುಖ್ಯ ವಿಜ್ಞಾನಿ ಡಾ. ಸೋಲೋಮನ್ ವಿಮಲ್ ನುಡಿದರು.
ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳಿಗೆ ಅಗತ್ಯವಿರುವ ಬೃಹತ್ ಡೇಟಾ ಸೆಂಟರ್ಗಳ ನಿರ್ವಹಣೆಗೆ ಅಪಾರ ಪ್ರಮಾಣದ ವಿದ್ಯುತ್ ಮತ್ತು ನೀರು ಬಳಕೆಯಾಗುತ್ತಿರುವುದು ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಊಟಿಯ ಜಿಯೋದಾರ್ ಸಂಸ್ಥೆಯ ಸಿಇಒ ಹಾಗೂ ಮುಖ್ಯ ವಿಜ್ಞಾನಿ ಡಾ. ಸೋಲೋಮನ್ ವಿಮಲ್ ನುಡಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ‘ಕೃತಕ ಬುದ್ದಿಮತ್ತೆಯ ಯುಗದಲ್ಲಿ ನೀರಿನ ಸಂರಕ್ಷಣೆಯ ಅಗತ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.
ಕಂಪ್ಯೂಟರ್ ಸರ್ವರ್ಗಳನ್ನು ತಂಪಾಗಿಡಲು ಹಾಗೂ ಅವುಗಳಿಗೆ ಅಗತ್ಯವಾದ ವಿದ್ಯುತ್ ಉತ್ಪಾದನೆಗೆ ನೀರಿನ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತಂತ್ರಜ್ಞಾನದ ಅಭಿವೃದ್ಧಿಯೊಂದಿಗೆ ನೀರಿನ ಸಂರಕ್ಷಣೆ ಮತ್ತು ಸುಸ್ಥಿರ ಸಂಪನ್ಮೂಲ ನಿರ್ವಹಣೆಗೆ ಆದ್ಯತೆ ನೀಡಬೇಕಾದ ಅಗತ್ಯವಿದೆ.ಎಚ್ಚರಿಕೆ ಅಗತ್ಯ: ಡೇಟಾ ಸೆಂಟರ್ಗಳ ನಿರ್ವಹಣೆಗೆ ಹೆಚ್ಚಿನ ಪ್ರಮಾಣದ ವಿದ್ಯುತ್ ಮತ್ತು ನೀರು ಬೇಕಾಗುತ್ತಿದೆ. ಆದ್ದರಿಂದ ಅವುಗಳನ್ನು ನಿರ್ಮಿಸುವಾಗ ಪರಿಸರದ ಮೇಲೆ ವಿಶೇಷ ಗಮನ ಹರಿಸಬೇಕು. ನೀರಿನ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆಯನ್ನು ನಿಯಂತ್ರಿಸುವುದು ಇಂದಿನ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ, ವಿವೇಕ ಆಳ್ವ, ವಿದ್ಯಾರ್ಥಿಗಳು ಜೀವನದ ಪ್ರತಿಯೊಂದು ಅನುಭವದಿಂದಲೂ ಕಲಿಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಾಧನೆ ಮಾಡಲು ಕೇವಲ ಪುಸ್ತಕ ಜ್ಞಾನಕ್ಕೆ ಸೀಮಿತವಾಗದೆ, ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಹೊಂದಬೇಕು. ಜೀವನದಲ್ಲಿ ದೊರೆಯುವ ಪ್ರತಿಯೊಂದು ಅವಕಾಶವನ್ನೂ ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನ ಮತ್ತು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಚರ್ಯ ಡಾ. ಕುರಿಯನ್, ರೋಸ್ಟ್ರಮ್ ವೇದಿಕೆಯ ಸಂಯೋಜಕಿ ಡಾ ದೀಪಾ ಕೊಠಾರಿ, ಆಳ್ವಾಸ್ ಕೃಷಿ ಕಾಲೇಜಿನ ಡೀನ್ ಡಾ ವಾಸುದೇವನ್, ಸಹಪ್ರಾಧ್ಯಪಕ ಡಾ ವಿನಯ ಭಾನು ಕಾರ್ಯಕ್ರಮ ನಿರೂಪಿಸಿ, ಇಂದಿರಾ ಕಾವ್ಯ ವಂದಿಸಿದರು.