ಸಾರಾಂಶ
ಚೀಲಗಾನಹಳ್ಳಿ ಗ್ರಾಮ ಸೇರಿದಂತೆ ಹಲವೆಡೆ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯಲ್ಲಿದ್ದ ದವಸ ಧಾನ್ಯ ನೀರು ಪಾಲಾಗಿದೆ.
ಮನೆಯಲ್ಲಿದ್ದ ದವಸ ಧಾನ್ಯ ನೀರು ಪಾಲು । ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಮನವಿ
ಕನ್ನಡಪ್ರಭ ವಾರ್ತೆ ಕೊರಟಗೆರೆ ತಾಲೂಕಿನ ಚೀಲಗಾನಹಳ್ಳಿ ಗ್ರಾಮ ಸೇರಿದಂತೆ ಹಲವೆಡೆ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯಲ್ಲಿದ್ದ ದವಸ ಧಾನ್ಯ ನೀರು ಪಾಲಾಗಿದ್ದು, ಸಹಾಯಕ್ಕೆ ಬರುವಂತೆ ಅಧಿಕಾರಿಗಳಿಗೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.ತಾಲೂಕಿನ ವಡ್ಡಗೆರೆ ಗ್ರಾಪಂ ವ್ಯಾಪ್ತಿಯ ಚೀಲಗಾನಹಳ್ಳಿ ಗ್ರಾಮದ ಪವಿತ್ರ ಹಾಗೂ ಮಂಜುನಾಥ್ ಎನ್ನುವವರ ಮನೆಗೆ ನಿನ್ನೆ ಸಂಜೆ ಸುರಿದ ಬಾರಿ ಮಳೆಯಿಂದ ನೀರು ನುಗ್ಗಿ ಅವಾಂತರ ಸೃಷ್ಠಿಸಿದ್ದು ಬಕೆಟ್, ಬಟ್ಟಲುಗಳನ್ನು ಹಿಡಿದು ನೀರು ಹೊರಹಾಕಬೇಕಾಯಿತು. ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ಸಂದರ್ಭದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು.ಕಳೆದ ಕೆಲವು ವಾರಗಳಿಂದ ಮಳೆ ಕೊರತೆಯಿಂದ ಬೆಳೆಗಳು ಒಣಗಿ ರೈತಾಪಿ ಕುಟುಂಬವು ಆಕಾಶದತ್ತ ಮುಖ ಮಾಡುವಂತಾಗಿತ್ತು. ಆದರೆ ಮಂಗಳವಾರ ಸಂಜೆ ಸುರಿದ ಭಾರೀ ಮಳೆ, ರೈತರಿಗೆ ಹೊಸ ಆಶಾ ಮೂಡಿಸಿತು. ಆದರೆ ಬಾರಿ ಮಳೆಯಿಂದ ರಸ್ತೆ ಬದಿಯ ಮನೆಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ನೀರು ನುಗ್ಗಿ ಜಲಾವೃತಗೊಂಡಿತು. ಹವಾಮಾನ ಇಲಾಖೆ ವರದಿಯಂತೆ ಮುಂದಿನ ಎರಡು ಮೂರು ದಿನಗಳ ಬಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕುಟುಂಬದ ರಕ್ಷಣೆ ಜೊತೆಗೆ ಆಹಾರ ಪದಾರ್ಥಗಳನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಚೀಲಗಾನಹಳ್ಳಿ ಗ್ರಾಮದಲ್ಲಿ ಮನೆಗೆ ನೀರು ನುಗ್ಗಿದ್ದ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಮೂಲಕ ರಸ್ತೆಯಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಿದ್ದಾರೆ ಎನ್ನಲಾಗಿದೆ. (ಚಿತ್ರ ಇದೆ)೦೬ ಕೊರಟಗೆರೆ ಚಿತ್ರ೦೧;-ಚೀಲಗಾನಹಳ್ಳಿ ಗ್ರಾಮದಲ್ಲಿ ಸುರಿದ ಬಾರಿ ಮಳೆಗೆ ಮನೆಗೆ ನುಗ್ಗಿದ ನೀರು.