ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು.
ದೇವರಹಿಪ್ಪರಗಿ : ಕ್ಷೇತ್ರದ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಹಾಗೂ ಈ ಯೋಜನೆಯಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು. ಪ್ರಧಾನಿ ಮೋದಿಜಿ ಅವರ ಕನಸಿನ ಜಲ ಜೀವನ್ ಮಿಷನ್ ಯೋಜನೆಯಡಿ ಸುಮಾರು ₹2.30 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ಗ್ರಾಮದ 1411 ಮನೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ತಿಳಿಸಿದರು.
ತಾಲೂಕಿನ ಹುಣಶ್ಯಾಳದಲ್ಲಿ ಶನಿವಾರ ಜಿಪಂ ವಿಜಯಪುರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿಂದಗಿ ಅವರ ಸಹಯೋಗದಲ್ಲಿ ಸುಮಾರು ₹ 2.30 ಕೋಟಿ ವೆಚ್ಚದ ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಎಲ್ಲ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿವೆ. ಪ್ರತಿ ಮನೆ ಮನೆಗಳಿಗೆ ಕುಡಿಯುವ ನೀರಿಗಾಗಿ ಸಂಪರ್ಕ ಕಲ್ಪಿಸಲು ಈಗಾಗಲೇ ಸರ್ಕಾರದಿಂದ ಅನುದಾನ ತಂದು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬರ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯಾಗಿದೆ. ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ಆದಷ್ಟು ಬೇಗ ಮತ್ತು ಗುಣಮಟ್ಟ ಕಾಮಗಾರಿಯನ್ನು ಮಾಡಿ ಮುಗಿಸಿ ಕೊಡಬೇಕು. ಜತೆಗೆ ಗ್ರಾಮದ ಪ್ರತಿಯೊಬ್ಬರು ಕಾಮಗಾರಿಗೆ ಸಹಕಾರ ನೀಡಬೇಕು ಎಂದು ಕಿವಿಮಾತು ಹೇಳಿದರು.
ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದ ಅವರು, ನಂತರ ಕ್ಷೇತ್ರದ ವಣಕ್ಯಾಳ ಗ್ರಾಮದಲ್ಲಿ ಸುಮಾರು ₹ 38 ಲಕ್ಷ ವೆಚ್ಚದ ಜೆಜೆಎಂ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಇಇ ತಾರಾನಾಥ ರಾಠೋಡ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಮಶಾಕಸಾಬ ಚೌದರಿ, ಗ್ರಾಪಂ ಅಧ್ಯಕ್ಷರ ಪ್ರತಿನಿಧಿ ಮೌನೇಶ್ ಪೂಜಾರಿ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸಾಯಿಬಣ್ಣ ಬಾಗೇವಾಡಿ, ಮುಖಂಡರಾದ ಗುರನಗೌಡ ಪಾಟೀಲ ಕುದುರಿಸಾಲವಾಡಗಿ, ಅಬ್ದುಲ್ ಗನಿ ಸಿಪಾಯಿ, ಅಹ್ಮದಸಾಬ ಮೋಮಿನ್, ಶರಣು ಧರಿ, ಹುಸೇನ್ ನಾಗಾವಿ, ಅಪ್ಪಾಸಾಹೇಬ ದೇವರಗುಡಿ, ಶರಣಪ್ಪ ಹಿಪ್ಪರಗಿ, ಡಿ.ಕೆ.ದೊಡಮನಿ, ಬಶೀರ್ ಸಿಪಾಯಿ, ಮಕ್ತುಂಸಾಬ ನಾಶಿ, ಮಲ್ಲನಗೌಡ ಕೋಟಿಖಾನಿ, ಶರಣಗೌಡ ಕೋಟಿಖಾನಿ, ರಮೇಶ ಹೆಂಡಿ, ಮುಸ್ತಫಾ ಸಿಪಾಯಿ, ಬಾಬು ಧನಪಾಲ, ಲಾಲಸಾಬ ನಾಗಾವಿ, ಇಲಾಖೆ ಅಧಿಕಾರಿ ಎಚ್.ಎಂ.ಸಾರವಾಡ, ಗುತ್ತಿಗೆದಾರರಾದ.ಎನ್.ಎಸ್.ಬಿರಾದಾರ, ದೇವೇಂದ್ರಪ್ಪ ಸಜ್ಜನ, ನಭಿ ಮುಲ್ಲಾ, ಸದ್ದಾಂ ಪೋಲಾಶಿ, ಬಾಬು ವಸ್ತದಿ, ಮುಸ್ತಫಾ ತಾಳಿಕೋಟಿ, ಬೀರಪ್ಪ ವಾಲೀಕಾರ, ಶಮೀರ್ ಹಾದಿಮನಿ ಸೇರಿದಂತೆ ಗ್ರಾಮದ ಪ್ರಮುಖರು, ಗ್ರಾಪಂ ಸಿಬ್ಬಂದಿ ವರ್ಗ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿವೆ. ಪ್ರತಿ ಮನೆ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಈಗಾಗಲೇ ಸರ್ಕಾರದಿಂದ ಅನುದಾನ ತಂದು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಪ್ರತಿಯೊಬ್ಬರ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯಾಗಿದೆ. ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಬೇಗ ಮತ್ತು ಗುಣಮಟ್ಟ ಕಾಮಗಾರಿಯನ್ನು ಮಾಡಬೇಕು.
- ರಾಜುಗೌಡ ಪಾಟೀಲ ಕುದುರಿಸಾಲವಾಡಗಿ, ಶಾಸಕ