ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ

| Published : Dec 21 2024, 01:15 AM IST

ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಶಿರಾದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿರಾ ವಾಣಿವಿಲಾಸ ಜಲಾಶಯದಿಂದ ಗಾಯಿತ್ರಿ ಜಲಾಶಯಕ್ಕೆ ನೀರುಹರಿಸುವ ಉದ್ದೇಶ ಸರ್ಕಾರ ಹೊಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹತ್ತಿರ ನೀರಿನ ಲಭ್ಯತೆ ಬಗ್ಗೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.ಅವರು ತಾಲೂಕಿನ ಗೌಡಗೆರೆ ಹೋಬಳಿಯ ಹುಣಸೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿರಾ ಕ್ಷೇತ್ರವನ್ನು ತ್ರಿವೇಣಿ ಸಂಗಮ ಮಾಡುವ ಸಂಕಲ್ಪ ಅತಿ ಶೀಘ್ರದಲ್ಲಿಯೇ ಈಡೇರಲಿದ್ದು, ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ಸಂಗಮವಾಗಲಿದೆ. ಹುಣಸೇಹಳ್ಳಿ, ಮೇಳೆ ಕೋಟೆ, ಹೇರೂರು ಸೇರಿದಂತೆ ಈ ಭಾಗದ ಕೆರೆಗಳಿಗೆ ನೀರು ಹರಿಸುವ ಉದ್ದೇಶ ಹೊಂದಿದ್ದು, ಬಯಲು ಸೀಮೆಗೆ ನೀರು ಹರಿಸಬೇಕೆಂಬ ಸಂಕಲ್ಪದೊMದಿಗೆ ನಾನು ಎಸ್.ಎಂ. ಕೃಷ್ಣ ರವರಲ್ಲಿ ಮನವಿ ಮಾಡಿದ ಕಾರಣ ಅಂದೆ ಭದ್ರಾ ಮೇಲ್ದಂಡೆ ಯೋಜನೆ ಕ್ರಿಯಾ ಯೋಜನೆ ಸಿದ್ಧವಾಯಿತು. ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಲು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಕಾರಣ ಎಂದರು.70ರ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಶಿಧರ ಹುಣಸೆಹಳ್ಳಿ ನಿಮ್ಮ ಈ ಪ್ರೀತಿ ವಿಶ್ವಾಸ ನನ್ನ ಜೀವಮಾನದಲ್ಲಿ ಎಂದೂ ಮರೆಯಲು ಸಾಧ್ಯವಿಲ್ಲ. ಹುಣಸೆಹಳ್ಳಿ ಭಾಗದ ರೈತರು ಮತ್ತು ಜನಸಾಮಾನ್ಯರು ನೆಮ್ಮದಿ ಜೀವನ ಮಾಡಬೇಕೆಂದರೆ ಶಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ರವರು ವಾಣಿವಿಲಾಸ ಜಲಾಶಯ ದಿಂದ ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸಬೇಕು ಇದು ನಮ್ಮೆಲ್ಲರ ಮಹತ್ವಾಕಾಂಕ್ಷೆಯ ಒತ್ತಾಯ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಸ್ಯ ಚಿದಾನಂದ ಎಂ ಗೌಡ, ಮಾಜಿ ಶಾಸಕ ಸಾಲಿಂಗಯ್ಯ, ಸಮಾಜ ಸೇವಕ ಹೆಚ್.ಪಿ. ಶಶಿಧರ್, ಶಿರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ಡಿಸಿಸಿ ಬ್ಯಾಂಕ್ ನಿರ್ದೇಶಕ ರವಿ, ನಗರಸಭೆ ಸದಸ್ಯ ಎಸ್.ಎಲ್. ರಂಗನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಶಶಿಧರ ಗೌಡ, ಕಾಂಗ್ರೆಸ್ ಮುಖಂಡರಾದ ತ್ಯಾಗರಾಜಪ್ಪ, ಸತ್ಯನಾರಾಯಣ, ಸಂಕಾಪುರ ಚಿದಾನಂದ, ನಗರಸಭೆ ಮಾಜಿ ಸದಸ್ಯ ರಾಜಣ್ಣ, ಪಿಡಿಓ ನಾಗರಾಜ್, ವಾಜರಹಳ್ಳಿ ರಮೇಶ್, ತಾಲೂಕು ಪಂಚಾಯಿತಿ ಎಡಿ ಕನಕಪ್ಪ, ಪಿಡಿಒ ವಿಜಯ್, ಜನಾರ್ಧನ್, ಹಾರೋಗೆರೆ ಮಹೇಶ್, ಯುವರಾಜ ಸೇರಿದಂತೆ ಹಲವರು ಹಾಜರಿದ್ದರು.