ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಘುನಾಥಪುರದಲ್ಲಿ ಕುಡಿಯುವ ನೀರು ಸೇರಿದಂತೆ ಅನೇಕ ಮೂಲಸೌಕರ್ಯಗಳ ಕೊರತೆ ಇದ್ದು, ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಗ್ರಾಮಸ್ಥರು ಮಂಗಳವಾರ ಮನವಿ ಪತ್ರ ಸಲ್ಲಿಸಿದರು
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಘುನಾಥಪುರದಲ್ಲಿ ಕುಡಿಯುವ ನೀರು ಸೇರಿದಂತೆ ಅನೇಕ ಮೂಲಸೌಕರ್ಯಗಳ ಕೊರತೆ ಇದ್ದು, ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಗ್ರಾಮಸ್ಥರು ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ರಘುನಾಥಪುರದಲ್ಲಿ 200ಕ್ಕೂ ಹೆಚ್ಚು ಮನೆಗಳಿದ್ದು, 2000 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ನಿತ್ಯ ಇಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಇದ್ದು, ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಟ್ಯಾಂಕರ್ ಗಳ ಮೂಲಕ ನಿತ್ಯ ಮನೆಗಳಿಗೆ ಬಳಕೆ ನೀರನ್ನು ಹಣ ನೀಡಿ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ, ಯಾವುದನ್ನು ಆಲೋಚನೆ ಮಾಡದೆ, ಕೆಲವು ದಿನಗಳ ಹಿಂದೆ ಗ್ರಾಮಸ್ಥರ ಒಪ್ಪಿಗೆ ಇಲ್ಲದೆ ಏಕಾಏಕಿ, ಇನ್ಫೋ ಸಿಟಿ ಒನ್ ಖಾಸಗಿ ಲೇಔಟಿಗೆ ಗ್ರಾಮದ ನೀರನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದರು.ಗ್ರಾಮದಲ್ಲೇ ಕುಡಿಯಲು ನೀರಿಲ್ಲದಿರುವಾಗ, ಖಾಸಗಿ ಲೇಔಟ್‌ಗಳಿಗೆ ನೀರು ಕೊಡುವುದು ಸರಿಯಲ್ಲ. ಅಧಿಕಾರಿಗಳು ಉಳ್ಳವರ ಪರ ನಿಂತು ಲೇಔಟ್ ವಾಸಿಗಳಿಗೆ ನೀರು ನೀಡುತ್ತಿದ್ದು, ಬಡ ಜನರಿಗೆ ತೀವ್ರ ತೊಂದರೆಯಾಗಿದೆ. ಈ ಕೂಡಲೇ ರಘುನಾಥಪುರದ ಜನರಿಗೆ ಸಮರ್ಪಕ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ಮುಖ್ಯಾಧಿಕಾರಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.4ಕೆಡಿಬಿಪಿ6-
ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರದಲ್ಲಿ ನೀರಿನ ಸಮಸ್ಯೆಬಗೆಹರಿಸುವಂತೆ ಒತ್ತಾಯಿಸಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.