ಕುಶಾಲನಗರ: ಕುಶಾಲನಗರ ಸಮೀಪದ ಹಾರಂಗಿ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರನ್ನು ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ಹರಿಸಲಾಯಿತು.ಜಲಾಶಯಕ್ಕೆ ಶನಿವಾರ ಸಂಜೆ ವೇಳೆಗೆ 4 ಸಾವಿರ ಕ್ಯೂಸೆಕ್‌ ಪ್ರಮಾಣದ ನೀರು ಒಳ ಹರಿವು ಹಿನ್ನೆಲೆಯಲ್ಲಿ ನಾಲ್ಕು ಗೇಟ್ ಗಳ ಮೂಲಕ ಒಟ್ಟು ನಾಲ್ಕು ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಹಾರಂಗಿ ಅಣೆಕಟ್ಟು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ ಜೆ ಪುಟ್ಟಸ್ವಾಮಿ ಮಾಹಿತಿ ಒದಗಿಸಿದರು. ಈ ಸಾಲಿನಲ್ಲಿ ಮಳೆಯ ಕೊರತೆ ಹಿನ್ನೆಲೆಯಲ್ಲಿ ಜಲಾಶಯ ತಡವಾಗಿ ತುಂಬಿದ್ದು ಜಲಾಶಯದ ಒಳಹರಿವಿನ ಪ್ರಮಾಣ ಹಾಗೂ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನದಿಗೆ ನೀರು ಬಿಡುವ ಮುನ್ನ ಅಣೆಕಟ್ಟಿನ ಮುಖ್ಯ ಗೇಟ್ ಗಳಿಗೆ ಪೂಜೆ ಸಲ್ಲಿಸಲಾಯಿತು. ಅಣೆಕಟ್ಟು ವಿಭಾಗದ ಸಹಾಯಕ ಇಂಜಿನಿಯರ್ ಕಿರಣ್, ತಾಲೂಕು ತಹಸಿಲ್ದಾರ್ ಕೃಷ್ಣಮೂರ್ತಿ ಮತ್ತು ಸ್ಥಳೀಯರು ಇದ್ದರು.