ಕಾಲುವೆ ಮೂಲಕ ನೀರು ಹರಿಸಿ ಕಚವಿ ಗ್ರಾಮಕ್ಕೆ ನೀರು ನುಗ್ಗದಂತೆ ಕ್ರಮ

| Published : Aug 24 2024, 01:17 AM IST

ಸಾರಾಂಶ

ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ತಾಲೂಕಿನ ಕಚವಿ ಗ್ರಾಮದ ಕೊಪ್ಪದ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿ ಸಂಪೂರ್ಣ ಗ್ರಾಮವೇ ಜಲಾವೃತಗೊಂಡಿದ್ದರಿಂದ ಗ್ರಾಮಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

ಹಿರೇಕೆರೂರ:ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ತಾಲೂಕಿನ ಕಚವಿ ಗ್ರಾಮದ ಕೊಪ್ಪದ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿ ಸಂಪೂರ್ಣ ಗ್ರಾಮವೇ ಜಲಾವೃತಗೊಂಡಿದ್ದರಿಂದ ಗ್ರಾಮಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕು ಕಚವಿ ಗ್ರಾಮದಲ್ಲಿ ಹೆಚ್ಚು ಮಳೆಯಿಂದಾಗಿ ಹಾಗೂ ಮಡ್ಲೂರು ಏತನೀರಾವರಿ ಯೋಜನೆಯಿಂದ ಗ್ರಾಮದ ಕೊಪ್ಪದ ಕೆರೆಯ ನೀರು ಹರಿಸಿದ್ದರಿಂದ ಕೆರೆ ಕೊಡಿ ಬಿದ್ದು ನೀರು ಗ್ರಾಮದೊಳಗ್ಗೆ ನುಗ್ಗಿದ್ದರಿಂದ ಸುಮಾರು ೩೦ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಗಳು ಗುರುವಾರ ರಾತ್ರಿ ೧೨ ಗಂಟೆಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಕೆರೆ ನೀರು ಗ್ರಾಮಕ್ಕೆ ನುಗ್ಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಬೆಳಗ್ಗೆ ಕಚವಿ ಗ್ರಾಮದಲ್ಲಿ ಮೂರು ಜೆಸಿಬಿ ಹಾಗೂ ಒಂದು ಇಟಾಚಿ ಬಳಸಿ ಕೆರೆಯ ನೀರು ಕೊಡಿ ಕಾಲುವೆ ಮುಖಾಂತರ ಸರಾಗವಾಗಿ ಹರಿಯುವಂತೆ ಹಾಗೂ ಗ್ರಾಮಕ್ಕೆ ನೀರು ನುಗ್ಗದಂತೆ ಕ್ರಮ ಕೈಗೊಂಡರು.ಈ ವೇಳೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ತಹಸೀಲ್ದಾರ್ ಎಚ್.ಪ್ರಭಾಕರಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಇಲಾಖೆಯ ಚಿರದಂಬರ ಹಾವನೂರ ಹಾಗೂ ಗ್ರಾಮಸ್ಥರು ಇದ್ದರು.