ಮಂಗಳೂರು: ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶಗಳಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ದ.ಕ. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ
ಮಂಗಳೂರು: ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶಗಳಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ದ.ಕ. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ನಗರದ ದ.ಕ. ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕಲುಷಿತ ನೀರು ಪೂರೈಕೆಯಾದರೆ ತಕ್ಷಣ ಸಮಸ್ಯೆ ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ನಿರ್ದೇಶನ ನೀಡಬೇಕು ಎಂದರು.ಪಿಡಿಒಗಳೇ ಹೊಣೆಗಾರರು:
ಅಶುದ್ಧ ನೀರಿನ ಪೂರೈಕೆ ಬಗ್ಗೆ ದೂರುಗಳು ಬಂದರೆ ಅಥವಾ ನಿರ್ಲಕ್ಷ್ಯ ವಹಿಸಿದರೆ ಪಿಡಿಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ ವಿನಾಯಕ್ ಕಾರ್ಬಾರಿ, ಜಲ ಜೀವನ್ ಮಿಷನ್ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಶೀಘ್ರ ಕೆಲಸ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ನಡೆಸಬೇಕು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‍ಗಳನ್ನು ಶುಚಿಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲಗಳಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಇದ್ದರು.