ಮಲಪ್ರಭಾ ಕಾಲುವೆಗಳಿಗೆ ನಿನ್ನೆಯಿಂದಲೇ ನೀರು ಪೂರೈಕೆ-ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

| Published : Jul 19 2025, 01:00 AM IST

ಮಲಪ್ರಭಾ ಕಾಲುವೆಗಳಿಗೆ ನಿನ್ನೆಯಿಂದಲೇ ನೀರು ಪೂರೈಕೆ-ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
Share this Article
  • FB
  • TW
  • Linkdin
  • Email

ಸಾರಾಂಶ

ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಭಾಗದಲ್ಲಿ ಕಳೆದ ಒಂದು ತಿಂಗಳಿಂದ ಮಳೆ ಆಗದ್ದರಿಂದ ರೈತರ ಬೆಳೆಗೆ ಅನುಕೂಲವಾಗಲೆಂದು ಜು.18ರಿಂದ ಮಲಪ್ರಭಾ ಕಾಲುವೆಗಳಿಗೆ ನೀರು ಪೂರೈಕೆ ಮಾಡಲಾಗುವುದೆಂದು ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನರಗುಂದ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಭಾಗದಲ್ಲಿ ಕಳೆದ ಒಂದು ತಿಂಗಳಿಂದ ಮಳೆ ಆಗದ್ದರಿಂದ ರೈತರ ಬೆಳೆಗೆ ಅನುಕೂಲವಾಗಲೆಂದು ಜು.18ರಿಂದ ಮಲಪ್ರಭಾ ಕಾಲುವೆಗಳಿಗೆ ನೀರು ಪೂರೈಕೆ ಮಾಡಲಾಗುವುದೆಂದು ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಅವರು ಶುಕ್ರವಾರ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಮುಖ್ಯ ಎಂಜಿನಿಯರರು, ಉತ್ತರ ವಲಯದ ಕಚೇರಿಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಅಧಿಕಾರಿಗಳೊಂದಿಗೆ, ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ರೈತರ ಅನುಕೂಲಕ್ಕಾಗಿ ಶುಕ್ರವಾರದಿಂದಲೇ ಕಾಲುವೆಗಳಿಗೆ ನೀರು ಬಿಡಲು ಆದೇಶ ಮಾಡಿ ಆನಂತರ ಮಾತನಾಡಿ, ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ರೈತ ಸಮುದಾಯ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದರೆ ಕಳೆದ ಒಂದ ತಿಂಗಳದಿಂದ ಮಳೆ ಆಗದೆ ಬೆಳೆಗಳು ಒಣಗುತ್ತಿರುವುದನ್ನು ಮನಗಂಡು ಮಲಪ್ರಭಾ ಬಲದಂಡೆ, ಎಡದಂಡೆ, ಕೊಳಚಿ ಕಾಲುವೆಗಳಗೆ ನೀರು ಪೂರೈಕೆ ಮಾಡಲಾಗುವುದೆಂದು ಹೇಳಿದರು.

ಈ ಸಂದರ್ಭದಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ, ಬದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಮೊಹಮ್ಮದ್ ರೋಷನ್, ಮಲಪ್ರಭಾ ನೀರು ಬಳೆಕದಾರರ ಮಹಾಮಂಡಳದ ಅಧ್ಯಕ್ಷ ಅಧ್ಯಕ್ಷ ಸದುಗೌಡ ಪಾಟೀಲ, ದ್ಯಾಮಣ್ಣ ಕಾಡಪ್ಪನವರ, ಗುರಪಾದಪ್ಪ ಕುರಹಟ್ಟಿ, ಮುಖ್ಯ ಇಂಜಿನಿಯರ್‌ ಅಶೋಕ ವಾಸನದ, ಲಕ್ಷ್ಮಣ ನಾಯಿಕ, ಎಸ್.ಬಿ. ಮಲ್ಲಿಗವಾಡ, ಸುಭಾಷ ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.