.ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು: ರೈತರ ವಿರೋಧ

| Published : Jan 17 2025, 12:46 AM IST

ಸಾರಾಂಶ

ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಿಭಟನೆ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಭಟನೆ ಮಾಡಿದರು.

ಯಾವುದೇ ಕಾರಣಕ್ಕೂ ಹುಬ್ಬಳ್ಳಿ- ಧಾರವಾಡ ಕೈಗಾರಿಕಾ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿ ಜಿಲ್ಲಾಧಕಾರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಹಿಡಕಲ್ ಜಲಾಶಯದಿಂದ ನೀರನ್ನು ಹುಬ್ಬಳ್ಳಿ-ಧಾರವಾಡಕ್ಕೆ ಕೈಗಾರಿಕಾ ಉದ್ದೇಶಕ್ಕಾಗಿ ನೀರನ್ನು ಒಯ್ಯುತ್ತಿದ್ದು, ಈ ಭಾಗದ

ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಹತ್ತಾರು ತಾಲೂಕುಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗುತ್ತದೆ. ಅದಕ್ಕೆ ಸಾಕಷ್ಟು ಬಾರಿ

ಹೋರಾಟ ಕೂಡಾ ಮಾಡಿದ್ದು ನಮ್ಮ ಭಾಗದ ಜನರಿಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ಯಾವುದೇ ಕಾರಣಕ್ಕೂ ಈ ಕೈಗಾರಿಕೆಗಳಿಗೆ

ಒಂದು ಹನಿ ನೀರನ್ನು ಕೊಡುವುದಿಲ್ಲ ಎಂದು ಹೇಳಿದರು.

ಪೈಪ್ ಲೈನ್ ಹಾಕಲಿಕ್ಕೆ ಯಾವ ರೈತರು ಕೂಡಾ ಅವಕಾಶ ಕೊಡುವುದಿಲ್ಲ. ರಾಜ್ಯ ಸರ್ಕಾರ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ , ತಾಲೂಕು ಅಧಿಕಾರಿಗಳು ತಕ್ಷಣವೇ ಈ ಕಾಮಗಾರಿಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಬರುವ ದಿನಮಾನಗಳಲ್ಲಿ ಕರ್ನಾಟಕದ ರಾಜ್ಯಾದ್ಯಂತ

ರೈತ ಸಂಘಟನೆ ಹಸಿರು ಸೇನೆ ಸಾವಿರಾರು ಸಂಖ್ಯೆಯಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ಚೂನಪ್ಪ ಪೂಜಾರಿ ಸಂಜು ಹೂವನ್ನವರ್ ಕಿಶನ್ ನಂದಿ ಜಗದೀಶ್‌ ದೇವರೆಡ್ಡಿ ಮೊದಲಾದ ರೈತರು ಪಾಲ್ಗೊಂಡಿದ್ದರು.