ಮಳೆ ಅಭಾವದಿಂದಾಗಿ ಪ್ರಸ್ತುತ ಶಿಂಷಾ ನದಿ ನೀರಿನ ಹರಿವು ಕಡಿಮೆಯಾಗಿದೆ. ಇದರಿಂದ ಬೆಳೆದು ನಿಂತ ರೈತರ ಬೆಳಗಳಿಗೆ ನೀರಿಲ್ಲದಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ.ಇದನ್ನು ಗಣನೆಗೆ ತೆಗೆದುಕೊಳ್ಳದ ಕಾರ್ಖಾನೆ ಆಡಳಿತ ಮಂಡಳಿ ನೀರು ಸರಬರಾಜು ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಕನ್ನಡಪ್ರಭ ವಾರ್ತೆ ಮದ್ದೂರು

ಶಿಂಷಾ ನದಿಯಿಂದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಗೆ ಅಕ್ರಮವಾಗಿ ನೀರು ಬಳಕೆ ಖಂಡಿಸಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಕೆ.ಬಿ.ಸಂತೋಷ್ ನೇತೃತ್ವದಲ್ಲಿ ಶಿಂಷಾ ನದಿಯಿಂದ ನೀರನ್ನು ಅಕ್ರಮವಾಗಿ ಪಡೆಯುತ್ತಿರುವ ಜಾಕ್ ವೆಲ್ ಬಳಿ ಪ್ರತಿಭಟನೆ ಇಳಿದ ರೈತರು ಕಾರ್ಖಾನೆಗೆ ನೀರು ಸರಬರಾಜು ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.

ಮಳೆ ಅಭಾವದಿಂದಾಗಿ ಪ್ರಸ್ತುತ ಶಿಂಷಾ ನದಿ ನೀರಿನ ಹರಿವು ಕಡಿಮೆಯಾಗಿದೆ. ಇದರಿಂದ ಬೆಳೆದು ನಿಂತ ರೈತರ ಬೆಳಗಳಿಗೆ ನೀರಿಲ್ಲದಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ.ಇದನ್ನು ಗಣನೆಗೆ ತೆಗೆದುಕೊಳ್ಳದ ಕಾರ್ಖಾನೆ ಆಡಳಿತ ಮಂಡಳಿ ನೀರು ಸರಬರಾಜು ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿದರು.

ರೈತರ ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕಾರ್ಖಾನೆ ಅಧಿಕಾರಿಗಳನ್ನು ಪ್ರತಿಭಟನಾನಿರತ ರೈತರು ತರಾಟೆಗೆ ತೆಗೆದುಕೊಂಡು, ಜಾಕ್ ವೆಲ್ ನೀರೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವುದನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ರೈತರ ಜಾಕ್ ವೆಲ್ ಬಂದ್ ಮಾಡುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಕೀಳಘಟ್ಟ ನಂಜುಂಡಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ರಮೇಶ್, ಕೆ. ಬಿ ಸಂತೋಷ್ ಮಹೇಶ, ರಾಘವೇಂದ್ರ, ನಂದೀಶ, ನವೀನ್, ಮರಿಲಿಂಗಯ್ಯ ಮತ್ತಿತರರು ಭಾಗವಹಿಸಿದ್ದರು.ಶ್ರೀ ಕೃಷ್ಣರಾಜೇಂದ್ರ ಸೊಸೈಟಿ ಅಧ್ಯಕ್ಷರಾಗಿ ಸಿ.ವಸಂತ್ ಕುಮಾರ್ ಅವಿರೋಧವಾಗಿ ಆಯ್ಕೆಶ್ರೀರಂಗಪಟ್ಟಣ: ಪಟ್ಟಣದ ಶ್ರೀ ಕೃಷ್ಣರಾಜೇಂದ್ರ ಸಹಕಾರಿ ಸಂಘ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿ.ವಸಂತ್‌ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಸಂಘದ ನಿಕಟ ಪೂರ್ವ ಅಧ್ಯಕ್ಷ ಎಸ್.ಕೆ.ಕುಬೇರ್ ಸಿಂಗ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಒಟ್ಟು 13 ಮಂದಿ ನಿರ್ದೇಶಕರ ಪೈಕಿ ಸಿ.ವಸಂತ್‌ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಸಂಘದ ಉಪಾಧ್ಯಕ್ಷರಾದ ಜಿ.ವಿ.ನಾರಾಯಣಸ್ವಾಮಿ ತಿಳಿಸಿದರು. ಸಂಘದ ನಿರ್ದೇಶಕರಾದ ವಿ.ನಾರಾಯಣ್, ಈ. ಪರಮೇಶ್, ಸಾಯಿಲೀಲಾ, ಭಾನುಮತಿ, ಚಂದ್ರಶೇಖರ್, ಸಿ. ಪ್ರಕಾಶ್, ಮಹದೇವ, ಕಾರ್ಯದರ್ಶಿ ಎಂ. ವಸಂತ ಕುಮಾರ್ ಸೇರಿದಂತೆ ಇತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.